ನೆಲಮಂಗಲ: ಬೈಕ್ ವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಮಹದೇವಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೈಕ್ ರಸ್ತೆಯಲ್ಲಿ ಚಲಿಸುತ್ತಿದ್ದ ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆದರೆ, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸೋಲೂರಿನ ರಂಗಸ್ವಾಮಿ(40) ಸಾವನ್ನಪ್ಪಿರುವ ಸವಾರ ಎನ್ನಲಾಗಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.