ಬೈಕ್ ಗಳ ಮುಖಾಮುಖಿ ಡಿಕ್ಕಿ, ಓರ್ವ ಸಾವು mandya saaksha tv
ಮಂಡ್ಯ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಹೊಸಹುಂಡಿ ಗೇಟ್ ಬಳಿ ಘಟನೆ ನಡೆದಿದ್ದು ಘಟನೆಯಲ್ಲಿ ಚನ್ನಹಳ್ಳಿ ಗ್ರಾಮದ ಬೈಕ್ ಸವಾರ ದರ್ಶನ್(19) ಸ್ಥಳದಲ್ಲೆ ಮೃತಪಟ್ಟಿದಾರೆ.
ಇನ್ನು ಘಟನೆಯಲ್ಲಿ ಹಿಂಬಂದಿ ಸವಾರ ಅಜಯ್(19) ಹಾಗೂ ಮತ್ತೊಂದು ಬೈಕಿನ ಸವಾರ ಕೃಷ್ಣಮೂರ್ತಿ(34) ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಅರಕೆರೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.









