ರಾಮನಗರ: ಬೈಕ್ ಗಳ ಮಧ್ಯೆ ಪರಸ್ಪರ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಂಜಿನಿಯರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈಘಟನೆ ಮಳವಳ್ಳಿ ತಾಲೂಕಿನ ಹಲಗೂರು (Halaguru) ಸಮೀಪದ ಬಸಾಪುರ ಗೇಟ್ ಹತ್ತಿರ ನಡೆದಿದೆ. ಹಲಗೂರು ಸಮೀಪದ ಬಳೆಹೊನ್ನಿಗ ಗ್ರಾಮದ ನರೇಗಾ ಇಂಜಿನಿಯರ್ ಆಗಿದ್ದ ಶರಣ್ಯ ಗೌಡ (25) ಸಾವನ್ನಪ್ಪಿರುವ ಮಹಿಳೆ ಎಂದು ಗುರುತಿಸಲಾಗಿದೆ.
ಈ ಘಟನೆ ಶನಿವಾರ ನಡೆದಿದೆ. ಕಳೆದ ಒಂದು ವರ್ಷದಿಂದ ಕನಕಪುರ ತಾಲೂಕಿನ ಸಾತನೂರು ಪಂಚಾಯತಿಯಲ್ಲಿ ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಫೆ.16 ರಂದು ಶರಣ್ಯ ವಿವಾಹ ನಿಶ್ಚಯವಾಗಿತ್ತು. ಶರಣ್ಯ ಬಳೆಹೊನ್ನಿಗ ಗ್ರಾಮದಿಂದ ಹಲಗೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಮತ್ತೊಂದು ಬೈಕ್ ಎದುರು ಬಂದಿದೆ. ಎರಡೂ ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಶರಣ್ಯ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.








