ಬೈಕ್ ವೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಉಜಿರೆಯ ಕಾಲೇಜು ರಸ್ತೆಯ ಹತ್ತಿರ ನಡೆದಿದೆ. ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದು ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಎಸ್.ಡಿ.ಎಮ್ ಕಾಲೇಜಿನ ಮ್ಯಾಕಾನಿಕಲ್ ಕೋರ್ಸ್ ಡಿಪ್ಲೋಮಾ ವಿದ್ಯಾರ್ಥಿಯಾಗಿದ್ದ ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ದಿಕ್ಷೀತ್(20) ಸಾವನ್ನಪ್ಪಿದ ದುರ್ದೈವಿ ಎನ್ನಲಾಗಿದ್ದು, ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದ್ದೆ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.