BMTC Accident- ಡಿಕ್ಕಿ ಹೊಡೆದು ಬೈಕ್ ಸವಾರ ಸಾವು – ಚಾಲಕನಿಗೆ ಸಾರ್ವಜನಿಕರಿಂದ ಥಳಿತ
ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನ ಪ್ರಮೋದ್ ಎಂದು ಗುರುತಿಸಲಾಗಿದೆ.
ಸುಮನಹಳ್ಳಿ-ಲಗ್ಗೆರೆ ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದ ಪ್ರಮೋದ್ ತಲೆಗೆ ಗಾಯವಾಗಿತ್ತು. ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಜೀವ ಬಿಟ್ಟಿದ್ಧಾನೆ.
ಘಟನೆಯಿಂದ ಆಕ್ರೋಶಗೊಂಡ ಸ್ಥಳಿಯರು BMTC ಬಸ್ ಚಾಲಕನಿಗೆ ಸಾರ್ವಜನಿಕವಾಗಿ ಥಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕಾಮಾಕ್ಷಿಪಳ್ಯ ಠಾಣೆ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತ ಯುವಕನ ಶವವನ್ನ ಮರಣೋತ್ತರ ಪರೀಕ್ಷೆಗೆ ಕೆ.ಸಿ.ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ.
Bike rider killed in BMTC collision – Driver beaten up by public