ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ : ಬೈಕ್ ಸವಾರ ಸಾವು
ಕೋಲಾರ : ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೋಲಾರದ ಮುಳಬಾಗಿಲಿನ ರಾಷ್ಟ್ರೀಯ ಹೆದ್ದಾರಿ 75 ನಲ್ಲಿ ನಡೆದಿದೆ.
ಮೃತನ ಹೆಸರು ತಿಳಿದುಬಂದಿಲ್ಲವಾದರೂ ಈತ ಮುಳಬಾಗಿಲು ತಾಲೂಕಿನ ಚಮಹಳ್ಳಿ ಗ್ರಾಮದ ನಿವಾಸಿ ಎಂದು ಹೇಳಲಾಗುತ್ತಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಪೋಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಮೃತ ಬೈಕ್ ಸವಾರರನ್ನು ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ.