ಖಾಸಗಿ ಬಸ್ ಚಾಲಕನ ಅತಿಯಾದ ವೇಗಕ್ಕೆ ಬೈಕ್ ಸಾವರ ಬಲಿಯಾಕಿರುವ ಘಟನೆಯೊಂದು ನಡೆದಿದೆ.
ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿ ಎಂಬ ಗ್ರಾಮದ ಹತ್ತಿರ ನಡೆದಿದೆ. ಪರಾರಿ ನಿವಾಸಿ ಧರಣೇಂದ್ರ (24) ಸಾವನ್ನಪ್ಪಿರುವ ದುರ್ದೈವಿ ಎನ್ನಲಾಗಿದೆ.
ಖಾಸಗಿ ಬಸ್ ವೇಗವಾಗಿ ತೆರಳುತ್ತಿದ್ದ ಹಿನ್ನೆಲೆಯಲ್ಲಿ ನಿಯಂತ್ರಣ ಕಳೆದುಕೊಂಡು ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಧರಣಏಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಾರ್ಗಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ. ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








