ಬೆಂಗಳೂರು: ನಗರದ ಮಹದೇವಪುರ ಬಿ. ನಾರಾಯಣಪುರದಲ್ಲಿದ್ದ ಯಮಹಾ ಬೈಕ್ ಶೋರೂಂಗೆ ಬೆಂಕಿ ತಗುಲಿದ್ದು, ಸುಮಾರು 50ಕ್ಕೂ ಅಧಿಕ ಬೈಕ್ ಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಬುಧವಾರ ರಾತ್ರಿ 8 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಅವಘಡ ಸಂಭವಿಸಿದ್ದರಿಂದಾಗಿ ಸುಮಾರು 50ಕ್ಕೂ ಅಧಿಕ ಬೈಕ್ ಗಳು ಸುಟ್ಟು ಭಸ್ಮವಾಗಿವೆ. ಅಲ್ಲದೇ ಶೋ ರೂಂ ಹಿಂಬದಿಯಲ್ಲಿರುವ ಸರ್ವೀಸ್ ಸೆಂಟರ್‌ಗೆ ಸಹ ಬೆಂಕಿ ತಗುಲಿದೆ. ಕೂಡಲೇ ಸಿಬ್ಬಂದಿ ಅಗ್ನಿಶಾಮಕಕ್ಕೆ ಮಾಹಿತಿ ನೀಡಿದೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅಷ್ಟರಲ್ಲಾಗಲೇ ದೊಡ್ಡ ಮಟ್ಟದಲ್ಲಿ ಬೆಂಕಿ ಅವರಿಸಿ ಶೋರೂಂನಲ್ಲಿದ್ದ 40ಕ್ಕೂ ಅಧಿಕ ಬೈಕ್ ಹಾಗೂ ಶೋರೂಂ ಹಿಂಭಾಗದ ಸರ್ವಿಸ್ ಸೆಂಟರ್ ನಲ್ಲಿದ್ದ 20ಕ್ಕೂ ಅಧಿಕ ಬೈಕ್ ಗಳು ಬೆಂಕಿಗೆ ಆಹುತಿಯಾಗಿವೆ.
ಪಕ್ಕದ ಶೋರೂಂಗೂ ಬೆಂಕಿ ತಗುಲಿದೆ ಎನ್ನಲಾಗಿದೆ. ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬರೋಬ್ಬರಿ ₹3...








