ನವದೆಹಲಿ: ಜಾಗತಿಕ ಹೆಮ್ಮಾರಿ ಕೊರೊನಾ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರಗಳಿಗೆ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಲ್ ಗೇಟ್ಸ್ ಪತ್ರವೊಂದನ್ನು ಬರೆದಿದ್ದಾರೆ. ದೇಶದೆಲ್ಲೆಡೆ ಲಾಕ್‌ಡೌನ್ ಜಾರಿ ಮಾಡಿರುವುದು, ಹೆಚ್ಚಿನ ಜನರನ್ನು ಪರೀಕ್ಷೆಗೆ ಒಳಪಡಿಸುವುದರಲ್ಲಿ, ಸೋಂಕು ಹರಡುವುದನ್ನು ತಡೆಯುವಲ್ಲಿ ಹಾಟ್ ಸ್ಪಾಟ್ ಗಳನ್ನು ಗುರುತಿಸಿ ಚಿಕಿತ್ಸೆ ನೀಡುವುದು, ಹೀಗೆ ಮುಂತಾದ ಕ್ರಮಗಳ ಬಗ್ಗೆ ಬಿಲ್ ಗೇಟ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕೊರೊನಾ ವೈರಸ್ ವಿರುದ್ಧ ಹೋರಾಡಲು ಅಗತ್ಯವಿರುವ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸಿದ್ದಕ್ಕೆ ಹಾಗೂ ಆರೋಗ್ಯ ಸೇತು ಆಪ್ ನ ಮೂಲಕ ಭಾರತದ ಡಿಜಿಟಲ್ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಂಡಿರುವ ಮೋದಿಯವರ ನಿರ್ಧಾರಗಳ ಬಗ್ಗೆ ಬಿಲ್ ಗೇಟ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ಹಾಗೇ ಎಲ್ಲಾ ಸಾರ್ವಜನಿಕರ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಅವರಿಗೆ ಸಾಮಾಜಿಕ ರಕ್ಷಣೆಯನ್ನು ನೀಡುವುದರ ಮೂಲಕ ಎರಡನ್ನೂ ಸಮತೋಲನಗೊಳಿಸಲು ಪ್ರಯತ್ನಿಸುತ್ತಿದ್ದೀರಿ. ಇದಕ್ಕೆ ಕೃತಜ್ಞ ಎಂದ ಬಿಲ್ ಗೇಟ್ಸ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ
ಒಂದು ಕಡೆ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಮಾಧ್ಯಮಗಳು ಶಾಂತಿ ಮಾತುಕತೆಗಳ ಬಗ್ಗೆ ಹೇಳುತ್ತಿದ್ದರೆ, ಇನ್ನೊಂದು ಕಡೆ ಇಸ್ಲಾಮಿಕ್ ರೆವ್ಯೂಲೇಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ಸಂಪೂರ್ಣವಾಗಿ...








