ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೋನಾ ಹೆಸರಲ್ಲಿ 2200 ಕೋಟಿ ರೂ . ಲೂಟಿ : ಸಿದ್ದರಾಮಯ್ಯ ಆರೋಪ

admin by admin
July 3, 2020
in Newsbeat, Politics, ರಾಜ್ಯ
Siddaramaiah1
Share on FacebookShare on TwitterShare on WhatsappShare on Telegram

ಬೆಂಗಳೂರು : ಕೊರೋನಾ ನಿರ್ವಹಣೆ ಹೆಸರಲ್ಲಿ 2200 ಕೋಟಿ ರೂ . ಲೂಟಿ ನಡೆದಿದ್ದು ಭಾರೀ ಪ್ರಮಾಣದ ಅಕ್ರಮಗಳು ನಡೆದಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕೊರೋನಾ ದಂತಹ ಸಂಕಷ್ಟ ಕಾಲದಲ್ಲೂ ಸರ್ಕಾರ ಸಾರ್ವಜನಿಕರ ಹಣದ ಲೂಟಿಗೆ ಇಳಿದಿದೆಯಲ್ಲದೇ ಮನುಷ್ಯತ್ವವನ್ನೇ ಮರೆತು ವರ್ತಿಸುತ್ತಿದೆ ಎಂದೂ ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅಕ್ರಮದ ವಿವಿಧ ಮುಖಗಳನ್ನು ತೆರೆದಿಟ್ಟ ಅವರು , ಆರೋಗ್ಯ ಇಲಾಖೆಯೊಂದರಲ್ಲೇ 3322 ಕೊಟಿ ರೂ. ಖರ್ಚಾಗಿದೆ. ಸ್ಯಾನಿಟೈಸರ್‍ ಖರೀದಿ ಸೇರಿದಂತೆ ಇಡೀ ಚಿಕಿತ್ಸಾ ವ್ಯವಸ್ಥೆಯನ್ನು ಕಲ್ಪಿಸುವ ವಿಚಾರದಲ್ಲಿ ಕೋಟ್ಯಂತರ ರೂ. ಅಕ್ರಮಗಳು ನಡೆದಿವೆ. ರಾಜ್ಯ ಸರ್ಕಾರ ಕೋವಿಡ್‍ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದೂ ಟೀಕಿಸಿದರು.

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026

ಮುಖ್ಯಮಂತ್ರಿ ಯಡಿಯೂರಪ್ಪ ಅಸಹಾಯಕರಾಗಿದ್ದಾರೆ. ಸಚಿವರಾದ ಶ‍್ರೀರಾಮುಲು, ಆರ್‍.ಅಶೋಕ್‍, ಡಾ. ಸುಧಾಕರ್‍, ಮತ್ತು ಸುರೇಶ್‍ ಕುಮಾರ್‍ ನಡುವೆ ಸಮನ್ವಯವೇ ಇಲ್ಲ. ಇಡೀ ಆಡಳಿತ ವ್ಯವಸ್ಥೆ ದಿಕ್ಕೆಟ್ಟು ಹೋಗಿದೆ ಎಂದೂ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಪ್ರಾರಂಭದ ಹಂತದಲ್ಲಿ ಸರ್ಕಾರ ಸ್ಥಾಪಿಸಿದ್ದ ಪರಿಹಾರ ನಿಧಿಗೆ ಭಾರೀ ಪ್ರಮಾಣದ ಹಣ ದೇಣಿಗೆ, ಅನುದಾನದ ರೂಪದಲ್ಲಿ ಹರಿದು ಬಂದಿದೆ. ಆದರೆ ಅದನ್ನು ಸಮರ್ಪಕವಾಗಿ ವೆಚ್ಚ ಮಾಡಲಾಗಿಲ್ಲ 815 ಕೋಟಿ ರೂ . ಹಣ ಏನಾಯ್ತು ಎಂಬುದರ ಲೆಕ್ಕವೇ ಸಿಗುತ್ತಿಲ್ಲಅಕ್ರಮ ನಡೆದಿದೆ ಎಂಬುದಕ್ಕೆ ಇದೂ ಒಂದು ಉದಾಹರಣೆ ಎಂದೂ ಆರೋಪಿಸಿದರು.

ಸರ್ಕಾರ ಕೊರೋನಾ ಪೀಡಿತರ ವಿಚಾರದಲ್ಲಿ ಎಷ್ಟು ಮಾನವೀಯತೆ ಮರೆತು ವರ್ತಿಸಿದೆ ಎಂದರೆ ಸೋಂಕಿನಿಂದ ಮೃತಪಟ್ಟ ರೋಗಿಗಳ ಶವ ಸಂಸ್ಕಾರವನ್ನೂ ಬೇಕಾ ಬಿಟ್ಟಿಯಾಗಿ ಅಮಾನವೀಯವಾಗಿ ಮಾಡಲಾಗಿದೆ. ಇಲ್ಲಿ ನಿಯಮಗಳೇ ಪಾಲನೆಯಾಗಿಲ್ಲ.

ಸೋಂಕಿತರು ಸರ್ಕಾರಿ ಆಸ್ಪತ್ರೆಗಳಿಗೆ ಹೋದರೆ ಹಾಸಿಗೆಗಳ ಕೊರತೆ ನೆಪ ಒಡ್ಡಿ ಚಿಕಿತ್ಸೆ ನಿರಾಕರಿಸಲಾಗುತ್ತಿದೆ. ಅಗತ್ಯ ಸಂಖ್ಯೆಯಲ್ಲಿ ಬೆಡ್‍ಗಳನ್ನು ಒದಗಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕಾಗಿದ್ದ ಸಚಿವರು ಪರಸ್ಪರ ಕಿತ್ತಾಡಿಕೊಳ್ಳುತ್ತಿದ್ದಾರೆ ಎಂದೂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಸರ್ಕಾರದ ಆಡಳಿತ ವ್ಯವಸ್ಥೆ ಎಷ್ಟು ಹಾಳಾಗಿದೆ ಎಂದರೆ ಶಾಸಕರಿಂದ ಐದು ಪರ್ಸೆಂಟ್‍ ಕಮಿಷನ್‍ ವಸೂಲಿ ಮಾಡುವ ಹಂತಕ್ಕೆ ಮುಟ್ಟಿದೆ. ಇದು ಲೂಟಿ ಅಲ್ಲದೇ ಮತ್ತೇನು? ಎಂದು ಪ್ರಶ್ನೆ ಮಾಡಿದ್ದಾರೆ.

Tags: CoronaSiddaramaiahYeddyurappa
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram