Biocon | ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಪತಿ ನಿಧನ
ಬೆಂಗಳೂರು : ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಅವರ ಪತಿ ಜಾನ್ ಶಾ ವಿಧಿವಶರಾಗಿದ್ದಾರೆ.
ಕುರಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಜಾನ್ ಶಾ ಕಳೆದ ಕೆಲವು ದಿನಗಳಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಇಂಗ್ಲೆಂಡ್ ಮೂಲದ ಜಾನ್ ಶಾ ಅವರು ವಿದೇಶಿ ಪ್ರವರ್ತಕರಾಗಿ ಮತ್ತು ವಿವಿಧ ಬಯೋಕಾನ್ ಗ್ರೂಪ್ ಕಂಪನಿಗಳ ಸಲಹಾ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಅಲ್ಲದೆ ಮಧುರಾ ಕೋಟ್ಸ್ ಲಿಮಿಟೆಡ್ ನ ಮಾಜಿ ಅಧ್ಯಕ್ಷರಾಗಿ ಮತ್ತು ಕೋಟ್ಸ್ ವಿಯೆಲ್ಲಾ ಗ್ರೂಪ್ ನ ಮಾಜಿ ಹಣಕಾಸು ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.
ಜಾನ್ ಶಾ ಅವರ ನಿಧನಕ್ಕೆ ಉದ್ಯಮ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಅವರ ಅಂತ್ಯಕ್ರಿಯೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಸ್ಮಶಾನದಲ್ಲಿ ಸಂಜೆ ನೆರವೇರಲಿದೆ.