ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲಬ್ ಕುಮಾರ್ ದೇವ್  ರಾಜೀನಾಮೆ….

1 min read

ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲಬ್ ಕುಮಾರ್ ದೇವ್  ರಾಜೀನಾಮೆ….

ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಒಂದು ದಿನದ ನಂತರ ಇದು ನಡೆದಿದೆ. ಎಂಟು ತಿಂಗಳ ನಂತರ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದ, ತ್ರಿಪುರಾದಲ್ಲಿ ನಾಯಕತ್ವ ಬದಲಿಸಲು ಬಿಜೆಪಿ ನಿರ್ಧರಿಸಿದೆ. 2023 ಚುನಾವಣೆಗೂ ಮೊದಲು ರಾಜ್ಯದಲ್ಲಿ ಇದೊಂದು  ಪ್ರಮುಖ ನಿರ್ಧಾರ ಎಂದು ಪರಿಗಣಿಸಲಾಗಿದೆ.

ಸಂಜೆ 5 ಗಂಟೆಗೆ ನಡೆಯಲಿರುವ ರಾಜ್ಯ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು. ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಗೆ ಕೇಂದ್ರ ಸಚಿವ ಭೂಪೇಂದರ್ ಯಾದವ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ವೀಕ್ಷಕರನ್ನಾಗಿ ಮಾಡಲಾಗಿದೆ.

Biplab Kumar Deb resigns as Tripura Chief Minister

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd