ಮಡಿಕೇರಿ/ಮೈಸೂರು: ನೆರೆಯ ಕೇರಳ ರಾಜ್ಯದ ಕೊಟ್ಟಾಯಂ ಮತ್ತು ಅಲಪ್ಪುಳ ಜಿಲ್ಲಾ ವ್ಯಾಪ್ತಿಯ ಬಾತುಕೋಳಿಗಳಲ್ಲಿ ಕೋಳಿ ಶೀತಜ್ವರ ಕಂಡುಬಂದಿದ್ದು, ಈ ಹಿನ್ನೆಲೆ ಕೊಡಗು ಹಾಗೂ ಮೈಸೂರು ಜಿಲ್ಲೆಯಲ್ಲಿಯೂ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕೋಳಿಗಳಿಗೆ ಶೀತಜ್ವರ (ಹಕ್ಕಿಜ್ವರ) ನಿಯಂತ್ರಣ ಸಂಬಂಧ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ ನೀಡಿದ್ದಾರೆ.
ಕೊಡಗು ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ ಭಾಗದಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಿ, ಕೇರಳ ರಾಜ್ಯದಿಂದ ಕೊಡಗು ಜಿಲ್ಲೆಗೆ ಆಗಮಿಸುವ ಕೋಳಿ ಹಾಗೂ ಕುಕ್ಕುಟ ಉತ್ಪನ್ನಗಳ ಸಾಗಾಣಿಕೆಯ ವಾಹನಗಳನ್ನು ಪರಿಶೀಲಿಸುವುದರ ಜೊತೆಗೆ, ಸಾಗಾಣಿಕೆ ವಾಹನಗಳನ್ನು ಸ್ಯಾನಿಟೈಸರ್ ಮಾಡಿ ಜಿಲ್ಲೆಯ ಒಳಗೆ ಪ್ರವೇಶಿಸಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದ್ದಾರೆ.
ಚೆಕ್‌ಪೋಸ್ಟ್ ಸ್ಥಾಪನೆ ಮತ್ತು ಅಗತ್ಯ ಸಹಕಾರಕ್ಕೆ ಅರಣ್ಯ, ಪೊಲೀಸ್, ಸಾರಿಗೆ ಇಲಾಖೆ ಅಧಿಕಾರಿಗಳು ಸಹಕಾರ ನೀಡಲಿದ್ದು, ಈ ಸಂಬಂಧ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಹಕ್ಕಿಜ್ವರ ನಿಯಂತ್ರಣ ಸಂಬಂಧ ಜಿಲ್ಲಾಡಳಿತ ಸರ್ಕಾರದ ಮಾರ್ಗಸೂಚಿಯಂತೆ ಗಡಿಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯ ಕೇರಳ ರಾಜ್ಯದ ಗಡಿಭಾಗದಲ್ಲಿ ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಲಾಗಿದ್ದು, ಅರಣ್ಯ, ಪೊಲೀಸ್, ಸಾರಿಗೆ, ಆರೋಗ್ಯ, ಪಂಚಾಯತ್ ರಾಜ್ ಇಲಾಖೆಗಳ ಸಹಕಾರ ಅತ್ಯಗತ್ಯ. ಅಸ್ವಾಭಾವಿಕವಾಗಿ ಕೋಳಿ ಅಥವಾ ವನ್ಯ ಪಕ್ಷಿಗಳ ಮರಣ ಕಂಡುಬಂದಲ್ಲಿ ಈ ಬಗ್ಗೆ ಗಮನಹರಿಸಿ ವರದಿ ಸಲ್ಲಿಸಲಾಗುವುದು ಎಂದರು.
ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಚಿದಾನಂದ ಅವರು ಹಕ್ಕಿಜ್ವರವು ಪಕ್ಷಿಗಳು ಹಾಗೂ ಕೋಳಿ ಮತ್ತಿತರ ಮೂಲಕ ಹರಡುವ ಸಾಧ್ಯತೆ ಇದ್ದು, ಕೇರಳ ರಾಜ್ಯದಲ್ಲಿ ಕಂಡು ಬಂದಿರುವುದರಿಂದ ಕೇರಳ ರಾಜ್ಯದ ಗಡಿಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಕೋಳಿ ಮತ್ತು ಪಕ್ಷಿಗಳ ರಕ್ತ ಹಾಗೂ ಇಕ್ಕೆ ಮಾದರಿಯಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಕೇರಳ-ಮೈಸೂರು ಗಡಿಯಲ್ಲಿ ಕೋಳಿ ಸಾಗಣೆ ಬಂದ್..!
ಕೇರಳ ರಾಜ್ಯದ ಹಲವೆಡೆ ಬಾತುಕೋಳಿಗಳಲ್ಲಿ ಹಕ್ಕಿಜ್ವದ ಲಕ್ಷಣಗಳು ಕಂಡು ಬಂದಿವೆ. ಜತೆಗೆ 50ಸಾವಿರ ಬಾತುಕೋಳಿಗಳನ್ನು ಹತ್ಯೆ ಮಾಡಲು ಕೇರಳ ಸರ್ಕಾರ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳದಿಂದ ಮೈಸೂರು ಜಿಲ್ಲೆ ಮಾರ್ಗವಾಗಿ ಕರ್ನಾಟಕಕ್ಕೆ ಬರುವ ಕೋಳಿಗಳು, ಪಕ್ಷಿಗಳ ಸಾಗಣೆಗೆ ನಿರ್ಬಂಧ ವಿಧಿಸಲಾಗಿದೆ.
ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲೂಕಿನ ಬಾವಲಿ ಚೆಕ್‍ಪೋಸ್ಟ್ ಮೂಲಕ ಕೋಳಿ ಹಾಗೂ ಪಕ್ಷಿಗಳ ಸಾಗಣೆಗೆ ನಿಷೇಧ ಹೇರಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕೇರಳದಿಂದ ಬಾವಲಿ ಚೆಕ್‍ಪೋಸ್ಟ್ ಮೂಲಕ ಬರುವ ವಾಹನಗಳನ್ನು ಸ್ಯಾನಿಟೈಸ್ ಮಾಡಲು ಸೂಚನೆ ನೀಡಲಾಗಿದೆ. ಜತೆಗೆ ಕೋಳಿಗಳು, ನಾಟಿಕೋಳಿಗಳು, ಕಾಡು ಹಕ್ಕಿಗಳು, ವಲಸೆ ಹಕ್ಕಿಗಳಲ್ಲಿ ಅಸ್ವಾಭಾವಿಕ ಲಕ್ಷಣಗಳು ಕಂಡು ಬಂದರೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel