ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರ : ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ – ಸುಧಾಕರ್
ಬೆಂಗಳೂರು: ಕೊರೊನಾ ಹಾವಳಿ, ಬ್ರಿಟನ್ ಕೊರೊನಾ ಭೀತಿ ಇದರ ನಡುವೆ ಇದೀಗ ಭಾರತದಲ್ಲಿ ಹಕ್ಕಿ ಜ್ವರದ ಆತಂಕ ಶುರುವಾಗಿದೆ. ಇದೀಗ ರಾಜ್ಯಕ್ಕೂ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಇತ್ತ ನೆರೆ ರಾಜ್ಯಗಳಲ್ಲಿ ಹಕ್ಕಿಜ್ವರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಗಡಿ ಪ್ರದೇಶದಲ್ಲಿ ಎಚ್ಚರಿಕೆ ವಹಿಸುವಂತೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಕರೆ ನೀಡಿದ್ದಾರೆ.
ಈ ಕುರಿತಾಗಿ ಮಾಹಿತಿ ನೀಡಿದ ಸಚಿವರು ಈ ಸಂಬಂಧ ಪಶು ಸಂಗೋಪನಾ ಇಲಾಖೆ ಸಚಿವರ ಜೊತೆಗೂ ಮಾತುಕತೆ ನಡೆಸಲಾಗಿದೆ. ಹಕ್ಕಿ ಜ್ವರ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಗಡಿಭಾಗಗಳಲ್ಲಿ ವಿಶೇಷ ಗಮನ ಇಡಲಾಗಿದೆ. ಪಶು ಸಂಗೋಪಣಾ ಇಲಾಖೆಯ ಜೊತೆಗೂಡಿ ಸಮಿತಿ ರಚಿಸಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಅಮೆರಿಕಾದಲ್ಲಿ ಟ್ರಂಪ್ ಬೆಂಬಲಿಗರ ದಾಂಧಲೆ : ಪ್ರಧಾನಿ ಮೋದಿ ಬೇಸರ
ಇನ್ನೂ ರಾಜ್ಯದಲ್ಲಿ ಇದುವರೆಗೆ ಹಕ್ಕಿ ಜ್ವರದ ಒಂದೇ ಒಂದು ಪ್ರಕರಣವೂ ದಾಖಲಾಗಿಲ್ಲ. ಕೇರಳ ಗಡಿಭಾಗದಲ್ಲಿರುವ ಜಿಲ್ಲೆಗಳಲ್ಲಿ ವಿಶೇಷ ಗಮನವಹಿಸಿದ್ದೇವೆ. ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ. ಜನರು ಜಾಗ್ರತೆವಹಿಸಬೇಕು ಎಂದು ಸಲಹೆ ನೀಡಿದ್ದಾರೆ.
ಇದೇ ವೇಳೆ ಕೊರೊನಾ ಸೋಂಕು ನಿರ್ವಹಣೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ. ರಾಜ್ಯದಲ್ಲಿ ಇದುವರೆಗೆ 11 ಜನರಿಗೆ ಬ್ರಿಟನ್ ಸೋಂಕು ಪತ್ತೆಯಾಗಿದೆ. ಬ್ರಿಟನ್ಗೆ ವಿಮಾನಯಾನ ಸೇವೆ ಪುನರಾರಂಭದ ಕುರಿತು ಸರ್ಕಾರ ನಿರ್ಧರಿಸಲಿದೆ. ನಮ್ಮ ಜನ ಕೊರೊನಾ ನಿಯಮಗಳ ಪಾಲನೆಗೆ ನಿರ್ಲಕ್ಷ್ಯ ತೋರುತ್ತಿರುವುದು ಅಪಾಯಕಾರಿ ಎಂದು ಕಳವಳ ವ್ಯಕ್ತಪಡಿಸಿದರು.
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel