ತೆಲುಗು ನಟ, ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ 69ನೇ ವರ್ಷದ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ಈ ವೇಳೆ ಪತ್ನಿ ಸುರೇಖಾ (Wife Surekha) ಕೂಡ ಇದ್ದರು. ಈ ಮೂಲಕ ನಟ ಚಿರಂಜೀವಿ ಅವರು ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ನಟನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ‘ವಿಶ್ವಾಂಭರ’ (Vishwambhara) ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡುವ ಚಿತ್ರತಂಡವು ಫ್ಯಾನ್ಸ್ ಗೆ ಉಡುಗೊರೆ ನೀಡಿದೆ.
ತ್ರಿಶೂಲ ಹಿಡಿದು ಸಖತ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಚಿರಂಜೀವಿ ಅವರನ್ನು ಕಂಡು ಅಭಿಮಾನಿಗಳು ಖುಷಿ ಪಟ್ಟಿದ್ದಾರೆ. ಪೋಸ್ಟರ್ ಲುಕ್ ಕಂಡು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಅಲ್ಲದೇ, ಈ ಪೋಸ್ಟರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.
‘ವಿಶ್ವಾಂಭರ’ ಸಿನಿಮಾದಲ್ಲಿ ಚಿರಂಜೀವಿ ಜೊತೆ ತ್ರಿಷಾ, ಮೀನಾಕ್ಷಿ ಚೌಧರಿ, ಕನ್ನಡದ ನಟಿ ಆಶಿಕಾ ರಂಗನಾಥ್ ಸೇರಿದಂತೆ ಹಲವರು ನಟಿಸಿದ್ದಾರೆ. ಈ ಚಿತ್ರವನ್ನು ಜ. 25ರಂದು ಬಿಡುಗಡೆ ಮಾಡಲು ತಂಡ ಸಿದ್ಧವಾಗಿದೆ.