ಬೆಂಗಳೂರು : ಇಂದು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನ. ಈ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿಎಸ್ ವೈ, “ಹಿರಿಯ ರಾಜಕಾರಣಿಗಳು, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಆತ್ಮೀಯರೂ ಆಗಿರುವ ಶ್ರೀ ಸಿದ್ದರಾಮಯ್ಯನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಹಿರಿಯ ರಾಜಕಾರಣಿಗಳು, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಆತ್ಮೀಯರೂ ಆಗಿರುವ ಶ್ರೀ ಸಿದ್ದರಾಮಯ್ಯನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ.@siddaramaiah
— B.S.Yediyurappa (@BSYBJP) August 12, 2020








