ಬೆಂಗಳೂರು : ಇಂದು ಚಂದನವನದ ನಟ ಡಾರ್ಲಿಂಗ್ ಕೃಷ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ. 36ನೇ ವಸಂತಕ್ಕೆ ಕಾಲಿಡುತ್ತಿರುವ ಕೃಷ್ಣ ಅವರಿಗೆ ಅವರ ಪ್ರೇಯಸಿ ಮಿಲನಾ ಸೋಶಿಯಲ್ ಮೀಡಿಯಾದ ಮೂಲಕ ಶುಭಾಶಯವನ್ನು ಕೋರಿದ್ದಾರೆ. ಮಿಲನಾ ಅವರು ಇನ್ ಸ್ಟಾಗ್ರಾಂನಲ್ಲಿ ತಮ್ಮ ಪ್ರಿಯಕರ ಕೃಷ್ಣನ ಜೊತೆ ಸ್ಕೂಟರ್ ಮೇಲೆ ಕುಳಿತಿರುವ ಫೋಟೋವನ್ನು ಶೇರ್ ಮಾಡಿದ್ದಾರೆ.

ಅಲ್ಲದೇ ‘ನೀವು ಪ್ರೀತಿಸುವಷ್ಟು ಬೇರೆ ಯಾರೂ ನನ್ನನ್ನೂ ಪ್ರೀತಿಸಲು ಸಾಧ್ಯವಿಲ್ಲ. ಹೀಗಾಗಿ ನೀವು ಉತ್ತಮ. ನಿಮ್ಮನ್ನು ಪಡೆದ ನಾನು ಅದೃಷ್ಟವಂತೆ. ನನ್ನ ಪ್ರಿಯತಮ ಡಾರ್ಲಿಂಗ್ ಕೃಷ್ಣನಿಗೆ ಜನ್ಮದಿನದ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ. ಮಿಲನಾ ಅವರು ವಿಶ್ ಮಾಡಿದ ತಕ್ಷಣ ಅಭಿಮಾನಿಗಳು ಕೂಡ ಕಮೆಂಟ್ ಮಾಡುವ ಮೂಲಕ ಕೃಷ್ಣ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದಾರೆ.
ಇನ್ನು ಲವ್ ಮಾಕ್ಟೇಲ್ ಸಿನಿಮಾದಲ್ಲಿ ಆದಿ ಮತ್ತು ನಿಧಿ ಪಾತ್ರದಿಂದ ಕೃಷ್ಣ ಮತ್ತು ಮಿಲನಾ ನಾಗರಾಜ್ ಮನೆ ಮಾತಾಗಿದ್ದಾರೆ. ಅಲ್ಲದೇ ಈ ಚಿತ್ರದ ಯಶಸ್ಸಿನ ಸಂಭ್ರಮದಲ್ಲಿ ಈ ಜೋಡಿ ತಮ್ಮ ಮದುವೆಯ ಗುಟ್ಟನ್ನು ರಟ್ಟು ಮಾಡಿದ್ದರು.








