ಬಿಸಿಲ ನಗರಿ ರಾಯಚೂರು ಜಿಲ್ಲೆ ಬಂದ್ ಗೆ ಜಿಲ್ಲೆಯಾದ್ಯಂತ ಬೆಂಬಲ ವ್ಯಕ್ತವಾಗಿದೆ.
ಬಂದ್ ಇದ್ದ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಸಾರಿಗೆ ವ್ಯವಸ್ಥೆ ಸ್ಥಬ್ಧವಾಗಿತ್ತು. ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮಿಸಲಾತಿ ಜಾರಿ ಮಾಡುವಲ್ಲಿ ರಾಜ್ಯ ಸರಕಾರ ಮಿನಾಮೇಶ ಎಣಿಸುತ್ತಿರುವುದನ್ನು ಕಂಡು ರಾಯಚೂರು ಜಿಲ್ಲೆಯಾದ್ಯಂತ ಬಂದ್ ಗೆ ಕರೆ ನೀಡಲಾಗಿತ್ತು.
ಒಳ ಮೀಸಲಾತಿಗೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ಆದರೆ ಒಳ ಮೀಸಲಾತಿ ಜಾರಿ ಮಾಡಲು ನ್ಯಾಯಾಲಯ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದ್ದು, ಅದನ್ನು ಜಾರಿ ಮಾಡಲು ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಬಂದ್ ಗೆ ಕರೆ ನೀಡಲಾಗಿತ್ತು. ಹೀಗಾಗಿ ಗುರುವಾರ ನಗರ ಸ್ತಬ್ಧವಾಗಿತ್ತು. ವ್ಯಾಪಾರ-ವಹಿವಾಟು ಸಂಪೂರ್ಣವಾಗಿ ಸ್ತಬ್ಧವಾಗಿತ್ತು. ಜನರು ಸ್ವಯಂ ಪ್ರೇರಿತರಾಗಿ ಬಂದ್ ಗೆ ಬೆಂಬಲ ಸೂಚಿಸಿದ್ದರು.
ಸಿರವಾರ ತಾಲೂಕಿನಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ರಾಯಚೂರು- ಲಿಂಗಸಾಗುರ ರಸ್ತೆ ಬಂದ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಕವಿತಾಳ ಪಟ್ಟಣದಲ್ಲಿ ಸಾರಿಗೆ ವಾಹನ ಇಲ್ಲದೆ ಪ್ರಾಯಾಣಿಕರು ಖಾಸಗಿ ಕ್ರಶರ್ ಮತ್ತು ಆಟೋಗಳಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳಿದರು.