BJP | ಸಿದ್ದರಾಮಯ್ಯ ಅವಧಿಯಲ್ಲಿ ಬಿಬಿಎಂಪಿಯಲ್ಲಿ 1400 ಕೋಟಿ ಹಗರಣ
ಬೆಂಗಳೂರು : ಬಿಬಿಎಂಪಿಯಲ್ಲಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ 1400 ಕೋಟಿ ಹಗರಣ ನಡೆದಿತ್ತು ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.
ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಸರ್ಕಾರಿ ಉದ್ಯೋಗಳಲಿಗೆ ಲಂಚ ಕೊಡುವ ಶಕ್ತಿಯಿಲ್ಲದ ಬಡ ಉದ್ಯೋಗಕಾಂಕ್ಷಿಗಳು ತಮ್ಮ ಪೋಷಕರು ಬೆಳೆದ ಅಕ್ಕಿ, ರಾಗಿ, ಜೋಳ ಮುಂತಾದ ಬೆಳೆಗಳ ಗಂಟನ್ನು ನನ್ನ ಕೈಗಿತ್ತು ಸರ್ಕಾರಕ್ಕೆ ತಲುಪಿಸಿ, ಉದ್ಯೋಗ ಕೊಡಿಸಿ ಎಂದು ಕೋರಿದ್ದಾರೆ.
ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ ಬಿಜೆಪಿ ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ ಎಂದು ಬರೆದುಕೊಂಡಿದ್ದರು.
ಇದಕ್ಕೆ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿರುವ ಬಿಜೆಪಿ, ಬಿಬಿಎಂಪಿಯಲ್ಲಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ 1400 ಕೋಟಿ ಹಗರಣ ನಡೆದಿತ್ತು. ಈ ಹಗರಣದಲ್ಲಿನ ಕಮಿಷನ್ ಮೊತ್ತವನ್ನು ಯಾವ ರೂಪದಲ್ಲಿ ಪಡೆದಿದ್ದು? ಧಾನ್ಯವೋ, ಧನವೋ?
ಸ್ಟೀಲ್ ಬ್ರಿಡ್ಜ್ ನಿರ್ಮಾಣದಲ್ಲಿ ಕಮಿಷನ್ ಯಾವ ಗಂಟಿನ ರೂಪದಲ್ಲಿ ಪಡೆದಿದ್ದು ಸಿದ್ದರಾಮಯ್ಯ ಅವರೇ? ಧಾನ್ಯವೋ, ಧನವೋ?
ಸಿದ್ದರಾಮಯ್ಯ ಅವರೇ, ನಿಮ್ಮ ಕಾಲದಲ್ಲಿ ಹಗರಣದ ಮೂಲಕ ಯಾವುದರ ಗಂಟು ಪಡೆದಿದ್ದು? ಧಾನ್ಯದ ಗಂಟೋ, ಧನದ ಗಂಟೋ ಎಂದು ಕುಟುಕಿದೆ.