ತುಮಕೂರು ಜಿಲ್ಲೆಯ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ 7ನೇ ತರಗತಿ ವಿದ್ಯಾರ್ಥಿ ತ್ರಿಶಾಲ್ (13) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತ್ರಿಶಾಲ್, ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರನಾಗಿದ್ದು, ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾನೆ.
ಡೆತ್ ನೋಟ್ ವಿಷಯ:
ಡೆತ್ ನೋಟ್‌ನಲ್ಲಿ ತ್ರಿಶಾಲ್ ತನ್ನ ಸಾವಿಗೆ ಕಾರಣವನ್ನು ಉಲ್ಲೇಖಿಸಿದ್ದಾನೆ. ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ ನಡೆದಿದ್ದು, ಅದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಪೊಲೀಸ್ ತನಿಖೆ:
ಘಟನೆ ಸಂಬಂಧ ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಕರಣವನ್ನು ಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
ಶಕುಂತಲಾ ನಟರಾಜ್ ಬಗ್ಗೆ:
ಶಕುಂತಲಾ ನಟರಾಜ್ ಅವರು ಬಿಜೆಪಿ ಕಾರ್ಯಕರ್ತೆಯಾಗಿದ್ದು, ಸದಾ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯನವರ ಕುಟುಂಬದ ಬಗ್ಗೆ ಟೀಕಿಸಿ ಬಂಧನಕ್ಕೊಳಗಾಗಿದ್ದರು.