ಕಾಂಗ್ರೆಸ್ ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೇ ಉಳಿದಿಲ್ಲ : ವಿಜಯೇಂದ್ರ
ಮೈಸೂರು : ಕಾಂಗ್ರೆಸ್ ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೇ ಉಳಿದಿಲ್ಲ. ಕೋವಿಡ್ ಸಂಕಷ್ಟ ಕಾಲದಲ್ಲಿ ಜನರ ನೋವಿಗೆ ಸ್ಪಂದಿಸುವುದ ಮರೆತು ಹಾದಿ ಬೀದಿಯಲ್ಲಿ ನಿಂತು ಸಿಎಂ ಅಭ್ಯರ್ಥಿ ಬಗ್ಗೆ ಮಾತಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಸುದ್ದಗಾರರೊಂದಿಗೆ ಮಾನತಾಡಿದ ಅವರು, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೇ ಉಳಿದಿಲ್ಲ.
ಕೋವಿಡ್ ಸಂಕಷ್ಟ ಕಾಲದಲ್ಲಿ ಜನರ ನೋವಿಗೆ ಸ್ಪಂದಿಸುವುದ ಮರೆತು ಹಾದಿ ಬೀದಿಯಲ್ಲಿ ನಿಂತು ಸಿಎಂ ಅಭ್ಯರ್ಥಿ ಬಗ್ಗೆ ಮಾತಾಡುತ್ತಿದ್ದಾರೆ.
ಕಾಂಗ್ರೆಸ್ ಎಲ್ಲಾ ವಿಚಾರದಲ್ಲೂ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನವರು ಬಿಜೆಪಿ ಬಗ್ಗೆ ಟೀಕಿಸುವುದು ಹಾಸ್ಯಸ್ಪದ ಎಂದು ಟೀಕೆ ಮಾಡಿದರು.
ಇನ್ನು ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ. ಹೈಕಮಾಂಡ್ ಈಗಾಗಲೇ ಈ ಬಗ್ಗೆ ಸ್ಪಷ್ಪಪಡಿಸಿದೆ.
ಪದೇ ಪದೇ ಈ ವಿಚಾರದ ಬಗ್ಗೆ ಚರ್ಚೆ ಮಾಡುವುದು ಬೇಡ. ಯಾರಾದರೂ ದೆಹಲಿಗೆ ಹೋಗಿದ್ದರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿಗೆ ಹೋದ ಕೂಡಲೇ ಅದಕ್ಕೆ ರಾಜಕೀಯ ಬಣ್ಣ ಹಚ್ಚುವುದು ಬೇಡ.
ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಈ ರಾಜ್ಯದ ಸಿಎಂ ಆಗಿ ಇರುತ್ತಾರೆ. ಈ ಬಗ್ಗೆ ಮತ್ತೆ ಮತ್ತೆ ಗೊಂದಲ ಯಾರಿಗೂ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.