ತುಮಕೂರು : ಕೆ.ಆರ್.ಪೇಟೆಯಲ್ಲಿ ವಿಜಯ ಸಾಧಿಸಿದಂತೆ ಶಿರಾ ಕ್ಷೇತ್ರದಲ್ಲೂ ಕಮಲ ಅರಳಿಸುತ್ತೇವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ಬಿ.ವೈ. ವಿಜಯೇಂದ್ರ ಇಂದು ಶಿರಾ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.
ಈ ವೇಳೆ ಅವರು ಶಿರಾ ನಗರದ ಕೋಟೆ ಬೀದಿ, ಸಂತೆಪೇಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಚಾರ ಮಾಡಿ ಮತದಾರರನ್ನು ಭೇಟಿ ಮಾಡಿದರು.
ಈ ವೇಳೆ ಮಾತನಾಡಿದ ವಿಜಯೇಂದ್ರ ಅವರು, ಕೆ.ಆರ್.ಪೇಟೆ ಮಾದರಿಯಲ್ಲಿ ಶಿರಾ ಉಪಚುನಾವಣೆಗೆ ಬಿಜೆಪಿ ಸಜ್ಜುಗೊಳ್ಳುತ್ತಿದೆ.
ಕೆ.ಆರ್.ಪೇಟೆಯಲ್ಲಿ ವಿಜಯ ಸಾಧಿಸಿದಂತೆ ಇಲ್ಲಿಯೂ ಕಮಲವನ್ನು ಅರಳಿಸುತ್ತೇವೆ.
ಈ ಹಿಂದೆ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವುದಿಲ್ಲ ಎಂದು ವಿರೋಧ ಪಕ್ಷದವರು ಬೊಬ್ಬೆಹೊಡೆದಿದ್ದರು.
ನಮ್ಮನ್ನ ಲೆಕ್ಕಕ್ಕೆ ತೆಗೆದುಕೊಂಡಿರಲಿಲ್ಲ. ಪಕ್ಷದ ಮುಖಂಡರು, ಕಾರ್ಯಕರ್ತರು ಎಲ್ಲಾ ಒಗ್ಗಟ್ಟಾಗಿ ಪ್ರಯತ್ನ ಮಾಡಿದ್ದ ಪರಿಣಾಮ, ಕೆ.ಆರ್.ಪೇಟೆಯಲ್ಲಿ 10 ಸಾವಿರ ಮತಗಳ ಅಂತದಿಂದ ಗೆಲುವು ಸಾಧಿಸಿದ್ದೇವು. ಹೊಸ ಸುದ್ದಿಗಳನ್ನು ಇಲ್ಲಿ ಓದಿ
ಅದೇ ರೀತಿ ಶಿರಾದಲ್ಲೂ ಗೆಲುವು ಸಾಧಿಸುತ್ತೇವೆ. ಬಿಜೆಪಿ ಪಕ್ಷದಲ್ಲು ಯಾರೇ ಅಭ್ಯರ್ಥಿ ಆದರೂ ಕಣಕ್ಕಿಳಿಸಿದವರನ್ನು ಒಗ್ಗಟ್ಟಾಗಿ ಗೆಲ್ಲಿಸಿಕೊಡುತ್ತೇವೆ ಎಂದು ಹೇಳಿದರು.








