BJP | ಸರ್ಕಾರ ಬೆಲೆ ಏರಿಕೆ ಬಗ್ಗೆ ಮಾತನಾಡಲಿ : ಸಿದ್ದರಾಮಯ್ಯ ಆಕ್ರೋಶ
ಹುಬ್ಬಳ್ಳಿ : ಕಳೆದ ಹದಿನೈದು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 9 ರೂಪಾಯಿ ಜಾಸ್ತಿಯಾಗಿದೆ. ಸರ್ಕಾರ ಬೆಲೆ ಏರಿಕೆ ಬಗ್ಗೆ ಮಾತನಾಡಲಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕಳೆದ ಹದಿನೈದು ದಿನಗಳಿಂದ ದೇಶದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿದೆ. 15 ದಿನಗಳಲ್ಲಿ 9 ರುಪಾಯಿ ಹೆಚ್ಚಾಗಿದೆ. ಇದರ ಜೊತೆಗೆ ಗ್ಯಾಸ್, ಅಡುಗೆ ಎಣ್ಣೆ, ಗೊಬ್ಬರ, ಹೋಟೆಲ್ ತಿಸಿಸು, ಜನೌಷಧ, ವಿದ್ಯುತ್ ದರ ಮುಂತಾದವುಗಳ ಬೆಲೆ ಜಾಸ್ತಿಯಾಗಿದೆ.
ಇದರ ಬಗ್ಗೆ ಬಿಜೆಪಿಯವರು ಮಾತನಾಡಲ್ಲ. ಈ ವಿಚಾರಗಳು ಚರ್ಚೆಯಾಗಬೇಕು. ಜನರ ಜೀವನಕ್ಕೆ ಸಂಬಂಧಿಸದ ವಿಚಾರಗಳನ್ನು ಮಾತನಾಡಿ ಅವರ ಧಾರ್ಮಿಕ ಭಾವನೆಗಳನ್ನು ಕೆರೆಳಿಸುವುದು ಖಂಡನೀಯವಾದುದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಬಿಜೆಪಿಯವರು ಸಮಾಜದ ಸಾಮರಸ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ ಸಿದ್ದರಾಮಯ್ಯ, ಜನರ ಮುಂದೆ ತಮ್ಮ ಸಾಧನೆಗಳ ಬಗ್ಗೆ ಮಾತನಾಡಲು ಅವರ ಬಳಿ ಸಾಧನೆಗಳೇ ಇಲ್ಲ. ಸರ್ಕಾರದ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಅದನ್ನು ಮುಚ್ಚಿಡಲು ಹಿಜಬ್, ಹಲಾಲ್, ಮಸೀದಿಗಳ ಧ್ವನಿವರ್ಧಕ ಮುಂತಾದ ಧಾರ್ಮಿಕ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ ಎಂದು ಆರೋಪಿಸಿದರು. bjp-believes-in-manuvada siddaramaiah says in hubli









