BJP | ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಎನ್ ಇಪಿ ರದ್ದು : ಕೈ ವಿರುದ್ಧ ಬಿಜೆಪಿ ಕಿಡಿ
ಬೆಂಗಳೂರು : ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎನ್ ಇಪಿ ರದ್ದು ಮಾಡಲಾಗುತ್ತದೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ್ದು, ಟ್ವಟ್ಟರ್ ನಲ್ಲಿ ಬಿಜೆಪಿ ಕಿಡಿಕಾರಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 370ನೇ ವಿಧಿ ಮರುಸ್ಥಾಪನೆ, ಎನ್‌ಇಪಿ, ಮತಾಂತರ ನಿಯಂತ್ರಣ ಕಾಯ್ದೆ, ಗೋಹತ್ಯೆ ನಿಷೇಧ ಕಾನೂನು ಸೇರಿದಂತೆ ದೇಶದ ಪರವಾಗಿರುವ ನಿರ್ಧಾರಗಳನ್ನು ರದ್ದುಗೊಳಿಸುವ ವಾಗ್ದಾನ ನೀಡುತ್ತಿದೆ ಎಂದು ಕಿಡಿಕಾರಿದೆ.
ಅಲ್ಲದೆ ಮತಾಂಧರ ಓಲೈಕೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ಇಂತಹ ನಿರ್ಧಾರ ಕೈಗೊಳ್ಳುವುದು ಅನಿವಾರ್ಯವೇ? ಎಂದು ದೇಶವಿರೋಧಿಕಾಂಗ್ರೆಸ್ ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಪ್ರಶ್ನೆ ಮಾಡಿದೆ.

ಶುಕ್ರವಾರ ಭಾರತ್ ಜೋಡೋ ಯಾತ್ರೆ ವೇಳೆ ಶಿಕ್ಷಣ ತಜ್ಷರು ಶಿಕ್ಷಣ ಸಂಸ್ಥೆಗಳ ಮಾಲೀಕರ ಜೊತೆಗೆ ರಾಹುಲ್ ಗಾಂಧಿ ಸಂವಾದ ನಡೆಸಿದರು.
ಬಳಿಕ ನಾಗಮಂಗಲದ ಅಂಚೆಭೂವನಹಳ್ಳಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಪ್ರಿಯಾಂಕ್ ಖರ್ಗೆ, ಪ್ರೊ ರಾಜೀವ್ ಗೌಡ,ಜೈರಾಮ್ ರಮೇಶ್ ಅವರು ಸಂವಾದದಲ್ಲಿ ನಡೆದ ಚರ್ಚೆ ಬಗ್ಗೆ ಮಾಹಿತಿ ನೀಡಿದರು.
ಈ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಎನ್ ಇಪಿ ಕಿತ್ತು ಹಾಕುತ್ತೇವೆ. ಒಂದಕ್ಷರವೂ ಇಲ್ಲದಂತೆ ಸಂಪೂರ್ಣವಾಗಿ ಎನ್ ಇಪಿ ರದ್ದುಪಡಿಸುತ್ತೇವೆ ಎಂದು ಹೇಳಿದರು.