ಬಸವಕಲ್ಯಾಣ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿ ನಮ್ಮ ಎದುರಾಳಿ ಅಲ್ಲ : ಸಿದ್ದರಾಮಯ್ಯ Siddaramaiah
ಬೀದರ್ : ಬಸವಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಮ್ಮ ಎದುರಾಳಿ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಮ್ಮ ಎದುರಾಳಿ ಅಲ್ಲ, ಅವರು ಈ ಕ್ಷೇತ್ರದವರಲ್ಲ.
ಅವರು ಪಕ್ಕದ ಗುಲಬರ್ಗಾ ಜಿಲ್ಲೆಯವರು. ಈಗಾಗಲೇ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಇದನ್ನೇ ಹೇಳಿದ್ದಾರೆ ಎಂದರು.
ಇನ್ನು ಇದೇ ವೇಳೆ ಸಾರಿಗೆ ನೌಕರರ ಮುಷ್ಕರದ ಬಗ್ಗೆ ಮಾತನಾಡಿ, ಸರ್ಕಾರ ಸಾರಿಗೆ ಕಾರ್ಮಿಕರ ಚಳವಳಿಯನ್ನ ಗಂಭೀರವಾಗಿ ಪರಿಗಣಿಸಬೇಕು.
ಖಾಸಗಿ ಬಸ್ ಗಳನ್ನ ಓಡಾಡಿಸುವುದು ಪರಿಹಾರವಲ್ಲ. ಸಾರ್ವಜನಿಕರಿಗೆ ತೊಂದರೆ ಆಗುವುದನ್ನ ಪರಿಹರಿಸಬೇಕು ಎಂದು ಸಲಹೆ ನೀಡಿದರು.
