ರಾಜ್ಯದ ಸಿಎಂ ಯಡಿಯೂರಪ್ಪನವರಾ? ಅಥವಾ ವಿಜಯೇಂದ್ರನಾ? : ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ವೈದ್ಯಾಧಿಕಾರಿಗಳ ಸಭೆ ನಡೆಸಿದ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರಾ? ಅಥವಾ ವಿಜಯೇಂದ್ರನಾ? ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಆರೋಗ್ಯ ಮಂತ್ರಿ ಶ್ರೀರಾಮುಲು ತನ್ನ ಕೈಯಲ್ಲಿ ಆರೋಗ್ಯ ಇಲಾಖೆಯನ್ನು ನಿಭಾಯಿಸೋಕೆ ಆಗ್ತಿಲ್ಲ, ಸ್ವಲ್ಪ ಸಹಾಯ ಮಾಡಿ ಅಂತ ಕೇಳಿರಬಹುದು. ಇಲ್ಲದಿದ್ದರೆ ಸಂವಿಧಾನಾತ್ಮಕ ಹುದ್ದೆಯೇ ಇಲ್ಲದ ವ್ಯಕ್ತಿಯೊಬ್ಬ ಸರ್ಕಾರಿ ಅಧಿಕಾರಿಗಳ ಸಭೆ ನಡೆಸೋಕೆ ಹೇಗೆ ಸಾಧ್ಯ? ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರಾ? ಅಥವಾ ವಿಜಯೇಂದ್ರನಾ ಎಂದು ಪ್ರಶ್ನಿಸಿದ್ದಾರೆ. ಇನ್ನಷ್ಟು ಸುದ್ದಿಗಳನ್ನು ಓದಿ

ಮತ್ತೊಂದು ಟ್ವೀಟ್ ನಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿ ಈಗಲೇ ಹೆಚ್ಚಿದೆ, ಇದಕ್ಕೆ ಇನ್ನಷ್ಟು ಗ್ರಾಮಗಳನ್ನು ಸೇರಿಸಿ, ಹುದ್ದೆಗಳ ಹೆಸರು ಬದಲಾಯಿಸಿದ್ರೆ ನಗರದ ಚಿತ್ರಣ ಬದಲಾಗುತ್ತಾ? ರಾಜಾಕಾಲುವೆಗಳ, ರಸ್ತೆಗಳ ದುರಸ್ತಿ, ಮೂಲ ಸೌಕರ್ಯ ಅಭಿವೃದ್ಧಿ ಆಗಬೇಕಲ್ಲಾ? ಬಿಜೆಪಿ ನಾಯಕರು ಬರೀ ಭಾಷಣದಿಂದ ಬದಲಾವಣೆ ಮಾಡೋಕೆ ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

Recent Posts

YOU MUST READ

Pin It on Pinterest

Share This