ಗೋಮಾತೆಯ ಸಂರಕ್ಷಣೆಗೆ ಬದ್ಧರಾಗೋಣ: ಬಿಜೆಪಿ ಯುವ ನಾಯಕ ಡಾ.ಅರುಣ್ ಸೋಮಣ್ಣ
ಬೆಂಗಳೂರು: ದೀಪಾವಳಿಯ ಬಲಿಪಾಡ್ಯಮಿಯ ಗೋಧೂಳಿ ಮುಹೂರ್ತದಲ್ಲಿ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರ ಗೋವಿಂದರಾಜನಗರದ ಶಾಸಕರ ಕಚೇರಿಯಲ್ಲಿ ಗೋಮಾತೆಗೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಲಾಯಿತು. ಸಚಿವರ ಮಾರ್ಗದರ್ಶನದಂತೆ ಬಿಜೆಪಿ ಯುವ ಮುಖಂಡ ಡಾ.ಅರುಣ್ ಸೋಮಣ್ಣ ಅವರ ನೇತೃತ್ವದಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರಿಂದ ಪೂಜಾ ಕಾರ್ಯಕ್ರಮ ನೆರವೇರಿತು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಅರುಣ್ ಸೋಮಣ್ಣ, ಮಹಾಭಾರತದ ಕಾಲಘಟ್ಟದಲ್ಲಿ ಕಾರ್ತಿಕ ಶುದ್ಧ ಪಾಡ್ಯದ ದಿನದಂದು ಶ್ರೀ ಕೃಷ್ಣ ಗೋವರ್ಧನ ಗಿರಿಯನ್ನು ಎತ್ತಿ ಹಿಡಿದು ಗೋಪಾಲಕರಿಗೆ ರಕ್ಷಣೆ ನೀಡಿದ ಎಂಬ ಪ್ರತೀತಿಯಿದೆ. ಇನ್ನು, ಬಲಿಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಗೋವುಗಳಿಗೆ ಅತಿಯಾದ ಮಹತ್ವ ನೀಡಲಾಗುತ್ತಿತ್ತು. ಈ ಸವಿನೆನಪಿಗಾಗಿ ಬಲಿಪಾಡ್ಯಮಿ ದಿವಸ ಗೋಮಾತೆಗೆ ಪೂಜೆ ಸಲ್ಲಿಸಲಾಗುತ್ತದೆ. ಸಕಲವನ್ನೂ ನೀಡುವ ಗೋಮಾತೆಯನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರದು.
ದೀಪಾವಳಿ : ಪಟಾಕಿಂದ 13 ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿ
ಅದರಲ್ಲೂ ಭಾರತ ಕೃಷಿ ಪ್ರಧಾನ ದೇಶವಾದ್ದರಿಂದ ಗೋವಿನ ತಳಿಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕಿದೆ. ಬಲಿಪಾಡ್ಯಮಿಯ ಪ್ರಯುಕ್ತ ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಗೋ ಪೂಜೆಗೆ ನೀಡಿರುವುದು ರಾಜ್ಯ ಸರ್ಕಾರದ ಉತ್ತಮ ನಿರ್ಣಯವಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಸದಸ್ಯರಾದ ಮೋಹನ್ ಕುಮಾರ್, ರೂಪ ಲಿಂಗೇಶ್, ರಾಮಪ್ಪ, ರಾಜೇಶ್ವರಿ ಬೆಳಗೋಡು ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.








