ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಪತನಗೊಂಡ ನಂತರದ ರಾಜಕೀಯ ಬೆಳವಣಿಗೆಗಳ ವಿರುದ್ಧ ಕೇರಳದಲ್ಲಿ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ ಅವರು ಆಕ್ರೋಶ ಹೊರಹಾಕಿದ್ದಾರೆ.. ಪ್ರಜಾಪ್ರಭುತ್ವ ಮಾರಾಟಕ್ಕಿದೆ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಿದೆ. ಯಾರು ಬೇಕಾದರೂ ಬಂದು ಹಣ ತೆಗೆದುಕೊಂಡು ಬಿಜೆಪಿ ಸೇರಬಹುದು.
ಇದು ಭಾರತದ ಪ್ರಜಾಪ್ರಭುತ್ವದ ಭವಿಷ್ಯ. ಆದರೆ ಭಾರತದ ಜನರು ಇದರ ವಿರುದ್ಧ ಹೋರಾಡಲಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.