BJP | ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್
ಬೆಂಗಳೂರು : ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್ ಎಂದು ರಾಜ್ಯ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಶಿಕ್ಷಕರ ನೇಮಕಾತಿ ಹಗರಣದ ಅಕ್ರಮ ಜಾಲವು ರಾಜ್ಯ ವ್ಯಾಪಿ ವಿಸ್ತರಿಸಿದೆ ಎಂಬ ಮಾಹಿತಿ ರಾಜ್ಯ ಅಪರಾಧ ತನಿಖಾ ದಳದ ತನಿಖೆಯಲ್ಲಿ ವ್ಯಕ್ತವಾಗಿದೆ ಎಂದು ವರದಿಯಾಗಿದೆ.
ಈ ಸಂಬಂಧ ರಾಜ್ಯ ಬಿಜೆಪಿ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದು, ಸಿದ್ದರಾಮಯ್ಯ ಅವಧಿಯ ಕಾಂಗ್ರೆಸ್ ಸರ್ಕಾರ 100% ಕಮಿಷನ್ ಸರ್ಕಾರವಾಗಿತ್ತು ಎನ್ನುವುದಕ್ಕೆ ಶಿಕ್ಷಕರ ಅಕ್ರಮ ನೇಮಕಾತಿ ಹಗರಣವೇ ಸಾಕ್ಷಿ. ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್.
ಕಾಂಗ್ರೆಸ್ ಸರ್ಕಾರದ ಪ್ರಭಾವಿ ಮಂತ್ರಿಗಳ ಶ್ರೀರಕ್ಷೆ ಇಲ್ಲದೆ ಶಿಕ್ಷಕರ ಅಕ್ರಮ ನೇಮಕಾತಿ ಹಗರಣದ ಜಾಲ ರಾಜ್ಯವ್ಯಾಪಿ ಪಸರಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯ ಬಗ್ಗೆ ಚಿಂತಿತರಾಗಿದ್ದಕ್ಕಿಂತ ಹೆಚ್ಚಾಗಿ ಹೈಕಮಾಂಡ್ ಗೆ ಕಪ್ಪ ಕಾಣಿಕೆ ನೀಡುವುದರಲ್ಲಿ ಮಗ್ನವಾಗಿತ್ತು.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಅವರ ಮೂಗಿನಡಿಯಲ್ಲಿಯೇ ಶಿಕ್ಷಕ ಹುದ್ದೆಯೊಂದಕ್ಕೆ 5 ರಿಂದ 10 ಲಕ್ಷ ಡೀಲ್ ನಡೆದಿದೆ. ಕಾಂಗ್ರೆಸ್ಸಿಗರೇ, ಸರ್ಕಾರಿ ಹುದ್ದೆಗಳನ್ನು ಮಾರಾಟ ಮಾಡಿ ನೀವು ಎಷ್ಟು % ಕಮಿಷನ್ ಗಳಿಸಿದ್ದೀರಿ ಎಂದು ಪ್ರಶ್ನಿಸಿದೆ.