BJP
ಶೀಘ್ರದಲ್ಲೇ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ..! : ರಾಜ್ಯ ಬಿಜೆಪಿ ಟ್ವೀಟ್, ಸಿಟಿ ರವಿ ಹೇಳಿದ್ದೇನು..?
ಬೆಂಗಳೂರು: ಹಲವು ವರ್ಷಗಳಿಂದಲೂ ರಾಜ್ಯಾದ್ಯಂತ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಕೂಗುಗಳು ಬಲವಾಗಿ ಕೇಳಿಬರುತ್ತಲೇ ಇದ್ದು ಶೀಘ್ರದಲ್ಲೇ, ಕಾಯ್ದೆ ಜಾರಿಯಾದರೂ ಆಗಬಹುದಾದ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ. ಹೌದು ಗೋಹತ್ಯೆ ನಿಷೇಧ ಮಾಡಲು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದೆ.
ಹೌದು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ‘ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ. ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಸರ್ಕಾರಕ್ಕೆ ಈ ಕುರಿತು ಸಲಹೆ ನೀಡಿದ್ದಾರೆ. ಇದರ ಬಗ್ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರೂ ಕೂಡ ಸಚಿವ ಪ್ರಭು ಚೌಹಾಣ್ ಜೊತೆಗೆ ಚರ್ಚೆ ನಡೆಸಿದ್ದಾರೆ’ ಎಂದು ತಿಳಿಸಿದೆ.
ಮರಾಠ ಸಮುದಾಯವನ್ನು ಪ್ರೀತಿಸೋಣ ಎಂದ ಡಿಸಿಎಂ ಲಕ್ಷ್ಮಣ್ ಸವದಿ..!
ಅಷ್ಟೇ ಅಲ್ಲದೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿಟಿ ರವಿ ಅವರು ಸಹ ಈ ಕುರಿತು ಟ್ವೀಟ್ ಮಾಡಿದ್ದು, ಶೀಘ್ರದಲ್ಲೇ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾಗಲಿದೆ. ಮುಂದಿನ ಅಧಿವೇಶನದಲ್ಲಿ ಗೋವುಗಳ ಕಳ್ಳತನ, ಹತ್ಯೆ ನಿಷೇಧ ಕಾಯ್ದೆಗಳು ಜಾರಿಗೊಳ್ಳಲಿದೆ’ ಎಂದು ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








