ನವದೆಹಲಿ : ರಾಜಸ್ಥಾನದ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಬಂಡಾಯ, ರಾಜಸ್ಥಾನದ ಕಾಂಗ್ರೆಸ್ ಹಾಗೂ ಸರ್ಕಾರದಲ್ಲಿ ಸಂಚಲನವನ್ನು ಸೃಷ್ಠಿಸಿದೆ. ಸಚಿನ್ ಗೆ ಸಿಎಂ ಅಶೋಕ್ ಗೆಹ್ಲೋಟ್ ಜೊತೆಗಿದ್ದ ಮುಸುಕಿನ ಗುದ್ದಾಟದ ಈಗ ಬಹಿರಂಗವಾಗಿದ್ದು, ಶೀಘ್ರದಲ್ಲೇ ಸಚಿನ್ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿನ್ ಪೈಲಟ್, ತಾವು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಆದ್ರೆ ಇಲ್ಲಿ ಕಾಂಗ್ರೆಸ್ ನಲ್ಲೇ ಮುಂದುವರಿಯುತ್ತೇನೆ ಎಂದು ಸಚಿನ್ ಹೇಳಿಲ್ಲ.
ಮೂಲಗಳ ಪ್ರಕಾರ, ಸಚಿನ್ ಪೈಲಟ್ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಈ ವಿಚಾರವಾಗಿ ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಅಂದಹಾಗೆ ಸಚಿನ್ ಪೈಲಟ್, ತಮಗೆ 34 ಶಾಸಕರ ಬೆಂಬಲವಿದೆ ಎಂದು ಹೇಳಿದ್ದರು. ಇನ್ನು ಬಿಕ್ಕಟ್ಟು ಉಲ್ಬಣವಾಗುತ್ತಿದ್ದಂತೆಯೇ ಕಾಂಗ್ರೆಸ್ ಮನವೊಲಿಕೆಗೆ ಮುಂದಾಗಿದೆ.








