‘ಕೂ’ಗೆ ಬಿಜೆಪಿ ಎಂಟ್ರಿ | ಡಿಜಿಟಲ್ ಅಸ್ತಿತ್ವ ಬಲಪಡಿಸುವತ್ತ ಹೆಜ್ಜೆ

1 min read
Siddaramaiah saaksha tv

ಬೆಂಗಳೂರು : ಸ್ಥಳೀಯ ಜನರೊಂದಿಗೆ ಸಂವಾದ ನಡೆಸಲು ಮತ್ತು ರಾಜ್ಯದಲ್ಲಿ ಡಿಜಿಟಲ್ ಅಸ್ತಿತ್ವವನ್ನು ಬಲಪಡಿಸಲು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಕರ್ನಾಟಕ ವಿಭಾಗವು ಬಹು-ಭಾಷಾ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ – ಕೂನಲ್ಲಿ ತನ್ನ ಖಾತೆಯನ್ನು ತೆರೆದಿದೆ. BJP saaksha tv

@BJP4Karnataka ಹ್ಯಾಂಡಲ್ ಮೂಲಕ ಪಕ್ಷದ ಅಭಿಪ್ರಾಯವನ್ನು ವ್ಯಕ್ತಪಡಿಸಲಾಗುತ್ತಿದೆ. ಈಗಾಗಲೇ ಸಾಕಷ್ಟು ವಿಚಾರಗಳನ್ನು ಬಿಜೆಪಿ ಕರ್ನಾಟಕ ವೇದಿಕೆಯಲ್ಲಿ ಹಂಚಿಕೊಂಡಿದೆ.

“ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಮತ್ತೆ ಜಗತ್ತಿನ ಅತ್ಯಂತ ನೆಚ್ಚಿನ ಜನನಾಯಕನಾಗಿ ಹೊರಹೊಮ್ಮಿದ್ದಾರೆ.

ಜಾಗತಿಕ ನಾಯಕರ ಅನುಮೋದನೆ ರೇಟಿಂಗ್‌ನಲ್ಲಿ ಜಗತ್ತಿನಾದ್ಯಂತದ ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರದ ದಿಗ್ಗಜ ನಾಯಕರ ಪೈಕಿ ಪ್ರಧಾನಿ ಮೋದಿ ಉನ್ನತ ಸ್ಥಾನದಲ್ಲಿದ್ದಾರೆ’ ಎಂದು ಬಿಜೆಪಿ ಕರ್ನಾಟಕ ಕೂ ಮಾಡಿದೆ.

ಬಿಜೆಪಿ ಕರ್ನಾಟಕ ನಮ್ಮ ಬಹುಭಾಷಾ ವೇದಿಕೆಗೆ ಬಂದಿರುವುದು ಸಂತೋಷಕರ. ಇದು ಸ್ಥಳೀಯ ಭಾರತೀಯ ಭಾಷೆಗಳಾದ್ಯಂತ ಅಭಿವ್ಯಕ್ತಿಯನ್ನು ಶಕ್ತಗೊಳಿಸುತ್ತದೆ.

BJP saaksha tv

ಕರ್ನಾಟಕದ ಜನರು ಈಗ ತಮ್ಮ ನೆಚ್ಚಿನ ಪಕ್ಷದೊಂದಿಗೆ ನೇರವಾಗಿ ಚರ್ಚಿಸಬಹುದಾಗಿದೆ ಮತ್ತು ಪಕ್ಷದ ಕುರಿತ ಎಲ್ಲ ಮಾಹಿತಿಯನ್ನು ಅವರ ಮಾತೃಭಾಷೆಯಲ್ಲೇ ತಿಳಿದುಕೊಳ್ಳಬಹುದಾಗಿದೆ’ ಎಂದು ಕೂ ವಕ್ತಾರರು ತಿಳಿಸಿದ್ದಾರೆ.

ದೇಸಿ ಆ್ಯಪ್ ಕೂ ಸಾಕಷ್ಟು ಜನಪ್ರಿಯತೆ ಗಳಿಸಿಕೊಳ್ಳುತ್ತಿದ್ದು, ಕ್ರೀಡಾತಾರೆಯರು, ಸಿನಿಮಾ ತಾರೆಯರು ಮತ್ತು ಕ್ಷೇತ್ರಗಳಾದ್ಯಂತದ ವ್ಯಕ್ತಿಗಳ ಜೊತೆಗೆ, ಕರ್ನಾಟಕದ ರಾಜಕೀಯ ನಾಯಕರು ಕನ್ನಡದಲ್ಲಿ ‘ಕೂ’ ಮಾಡುವ ಮೂಲಕ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ @bsbommai,, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ @bsybjp, ಮಾಜಿ ಪ್ರಧಾನಿ ಎಚ್ . ಡಿ ದೇವೇಗೌಡ @h_d_devegowda, ಕರ್ನಾಟಕ ಕಾಂಗ್ರೆಸ್ @inckarnataka ಮತ್ತು ಜನತಾ ದಳ @jds_official ಸೇರಿದಂತೆ ಈಗಾಗಲೇ ಕರ್ನಾಟಕದ ಅನೇಕ ಗಣ್ಯರು ಕೂ ಆ್ಯಪ್ ಪ್ರವೇಶಿಸಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd