ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತು ಹೋಗಿದೆ : ಸಿದ್ದರಾಮಯ್ಯ

1 min read
siddaramaiah

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತು ಹೋಗಿದೆ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತು ಹೋಗಿದ್ದು, ಸಂಪೂರ್ಣ ಅರಾಜಕತೆ ಸೃಷ್ಟಿಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಪುಲಿಕೇಶಿ ನಗರ ವಿಧಾನಸಭೆ ಕೇತ್ರದಲ್ಲಿ ಆಹಾರ ಧಾನ್ಯಗಳ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರ ವಿರುದ್ಧ ಕಿಡಿಕಾರಿದ್ರು.

ಹೆಚ್ಚು ರೋಗಿಗಳು ಪತ್ತೆ ಆಗಬಾರದು ಎಂಬ ಕಾರಣಕ್ಕೆ ಸರ್ಕಾರ ಕೊರೊನಾ ಪರೀಕ್ಷೆ ಪ್ರಮಾಣ ಕಡಿಮೆ ಮಾಡಿದೆ. ಪರೀಕ್ಷೆ ಹೆಚ್ಚಾದರೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತದೆ.

Siddaramaiah

ಜನರು ತಪ್ಪದೇ ಕೋ ವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಯಾವುದಾದರೂ ಒಂದು ಹಾಕಿಸಿಕೊಳ್ಳಿ. ಲಸಿಕೆ ಮಾತ್ರ ಶಾಶ್ವತ ಪರಿಹಾರವಾಗಿದೆ ಎಂದು ಮನವಿ ಮಾಡಿಕೊಂಡರು.

ಇನ್ನು ಲಾಕ್ ಡೌನ್ ಬಗ್ಗೆ ಮಾತನಾಡಿ, ಎರಡು ವಾರ ಸಂಪೂರ್ಣವಾಗಿ ಲಾಕ್ಡೌನ್ ಮಾಡಬೇಕೆಂಬುದು ನನ್ನ ಅಭಿಪ್ರಾಯವಾಗಿದೆ. ಪ್ರತಿನಿತ್ಯ 50 ಸಾವಿರ ಜನರಿಗೆ ಪಾಸಿಟಿವ್ ಬರ್ತಿದೆ.

ಇದು ಒಬ್ಬರಿಂದ ಒಬ್ಬರಿಗೆ ಹರಡುವ ರೋಗ. ಜನತೆ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ. ನಿಮ್ಮ ರಕ್ಷಣೆ ಜತೆಗೆ ಬೇರೆಯವರ ರಕ್ಷಣೆ ಸಹ ಮಾಡಬೇಕೆಂದು ಮನವಿ ಮಾಡಿದರು.

corona cases

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd