ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕ್ರೈಂ ರೇಟ್‌ ಹೆಚ್ಚಳಕ್ಕೆ ಬಿಜೆಪಿ ಸರಕಾರ ಕಾರಣ: ಆಮ್‌ ಆದ್ಮಿ ಪಾರ್ಟಿ

Mahesh M Dhandu by Mahesh M Dhandu
October 7, 2021
in Newsbeat, Politics, ರಾಜಕೀಯ
Aam Aadmi Party saaksha tv
Share on FacebookShare on TwitterShare on WhatsappShare on Telegram

ಕ್ರೈಂ ರೇಟ್‌ ಹೆಚ್ಚಳಕ್ಕೆ ಬಿಜೆಪಿ ಸರಕಾರ ಕಾರಣ: ಆಮ್‌ ಆದ್ಮಿ ಪಾರ್ಟಿ

ಬೆಂಗಳೂರು, ಅಕ್ಟೋಬರ್‌ 7: ಮಹಿಳೆಯರಿಗೆ ಸುರಕ್ಷಿತ ನಗರವನ್ನಾಗಿಸುವ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಸೇಫ್‌ ಸಿಟಿ ಪ್ರಾಜೆಕ್ಟ್‌ನ್ನು ರಾಜ್ಯದಲ್ಲಿ ಅಳವಡಿಸಲು ಅನಗತ್ಯ ವಿಳಂಬ ಧೋರಣೆಯನ್ನು ಬಿಜೆಪಿ ಸರಕಾರ ತೋರಿಸುತ್ತಿದೆ. ಈ ಮೂಲಕ ನಗರದ ಕ್ರೈಂ ರೇಟ್‌ ಹೆಚ್ಚಳವಾಗಲು ಕಾರಣವಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷರಾದ ಮೋಹನ್‌ ದಾಸರಿ ಆರೋಪಿಸಿದ್ದಾರೆ.

Related posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

May 15, 2026
ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

May 15, 2026

ಇಂದು ಪ್ರೆಸ್‌ಕ್ಲಬ್‌ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ನಡೆದಂತಹ ಘನಘೋರ ಅತ್ಯಾಚಾರ ಪ್ರಕರಣದ ನಂತರ ದೆಹಲಿ ನಗರ ಪೊಲೀಸ್‌ ಈ ಯೋಜನೆಯನ್ನು ರೂಪಿಸಿತ್ತು. 2018 ರಲ್ಲಿ ಈ ಯೋಜನೆಗೆ ಕೇಂದ್ರ ಸರಕಾರದ ಗೃಹ ಇಲಾಖೆ ಅನುಮತಿ ನೀಡಿತ್ತು. ಈ ಯೋಜನೆಯ ಅಡಿಯಲ್ಲಿ ಬೆಂಗಳೂರು, ದೆಹಲಿ, ಮುಂಬಯಿ, ಚೆನ್ನೈ, ಹೈದರಾಬಾದ್‌, ಲಕ್ನೋ, ಅಹಮದಾಬಾದ್‌ ಮತ್ತು ಕೋಲ್ಕೊತ್ತಾ ನಗರಗಳಿಗೆ ಹಣಕಾಸಿನ ನೆರವನ್ನು ಒದಗಿಸಲಾಗಿತ್ತು. ಬೆಂಗಳೂರು ನಗರಕ್ಕೆ ಮೊದಲ ಹಂತವಾಗಿ 667 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿತ್ತು.

ಈ ಹಣವನ್ನು ಬಳಸಿಕೊಂಡು ನಗರದಲ್ಲಿ ಮೂರು ವರ್ಷಗಳ ಅವಧಿಯಲ್ಲಿ, 16 ಸಾವಿರ ಕ್ಯಾಮೆರಾಗಳನ್ನು ಅಳವಡಿಸುವುದು ಪ್ರಮುಖ ಗುರಿಯಾಗಿತ್ತು. ಅಲ್ಲದೆ, 50 “ಸೇಫ್ಟೀ ಐಲ್ಯಾಂಡ್‌” ಗಳನ್ನು ರೂಪಿಸುವುದು ಈ ಯೋಜನೆಯಲ್ಲಿತ್ತು. ಈ ಯೋಜನೆ ಅನುಷ್ಠಾನ ಮಾಡವಲ್ಲಿ ರಾಜ್ಯ ಸರಕಾರ ವಿನಾಕಾರಣ ವಿಳಂಬ ಮಾಡಿದೆ. ಕೇಂದ್ರ ಸರಕಾರ ಯೋಜನೆಗೆ ಅನುಮತಿ ನೀಡಿದ ನಂತರ ರಾಜ್ಯ ಸರಕಾರ ಮತ್ತೊಂದು ವರ್ಷ ಸಮಯ ತಗೆದುಕೊಂಡಿತು. ಆ ನಂತರ, ಈ ವರೆಗೂ ನಾಲ್ಕು ಟೆಂಡರ್‌ ಗಳನ್ನು ಕರೆದಿರುವ ರಾಜ್ಯ ಸರಕಾರ ಕೊನೆಗೂ ಯೋಜನೆ ಅನುಷ್ಠಾನಕ್ಕೆ ಕಂಪನಿಯೊಂದನ್ನು ಅಂತಿಮಗೊಳಿಸುವ ಹಂತಕ್ಕೆ ತಲುಪಿದೆ.

Aam Aadmi Party saaksha tv

ವಿಶ್ವದಲ್ಲೇ ಅತಿ ಹೆಚ್ಚು ಸರ್ವೇಲೆನ್ಸ್‌ ಕ್ಯಾಮೆರಾ ಹೊಂದಿರುವ ನಗರ ದೆಹಲಿ:
ಕೇಂದ್ರ ಸರಕಾರದಿಂದ ಅನುದಾನ ಪಡೆದುಕೊಳ್ಳುವ ಮೂಲಕ ದೆಹಲಿ ಯಲ್ಲಿ ಪ್ರತಿ ಒಂದು ಚದರ ಮೈಲಿಗೆ 1826.6 ಕ್ಯಾಮೆರಾಗಳನ್ನು ದೆಹಲಿಯಲ್ಲಿ ಅಳವಡಿಸಲಾಗಿದೆ. ಈ ಮೂಲಕ ವಿಶ್ವದಲ್ಲೇ ಅತಿ ಹೆಚ್ಚು ಸರ್ವೇಲೆನ್ಸ್‌ ಕ್ಯಾಮೆರಾಗಳನ್ನು ಹೊಂದಿರುವ ನಗರ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಲಂಡನ್‌ ನಗರ 2 ನೇ ಸ್ಥಾನದಲ್ಲಿದ್ದು, 3 ಸ್ಥಾನವನ್ನು ಚೈನ್ನೈ ಪಡೆದುಕೊಂಡಿದೆ.

ಬೆಂಗಳೂರು ನಗರದಲ್ಲಿ ಈ ಯೋಜನೆ ಪ್ರಾರಂಭಕ್ಕೆ ಗ್ರಹಣ ಹಿಡಿಸಿರುವ ಸರಕಾರ:
ಇಂತಹ ಮಹತ್ವಪೂರ್ಣ ಯೋಜನೆಯ ಅನುಷ್ಠಾನಕ್ಕೆ ಜೆಸಿಬಿ ಸರಕಾರಗಳು ಗ್ರಹಣ ಹಿಡಿಸಿವೆ. ಮಹಿಳೆಯರ ವಿರುದ್ದ ಅಫರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ, ಇದನ್ನು ಸಮರ್ಥವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಯಾವುದೇ ಮನಸ್ಥಿತಿಯನ್ನು ತೋರಿಸದೇ ಇರುವುದು ಎಷ್ಟರ ಮಟ್ಟಿಗೆ ಸರಿ?

ನಗರದಲ್ಲಿ ಕ್ರೈಂ ರೇಟ್‌ ಹೆಚ್ಚಲು ಬಿಜೆಪಿ ಸರಕಾರ ಕಾರಣ:
ನಿರ್ಭಯಾ ನಿಧಿಯನ್ನು ಬಳಸಿಕೊಳ್ಳದೆ ಇರುವ ಮೂಲಕ ನಗರದಲ್ಲಿ ಅಫರಾಧ ಅದರಲ್ಲೂ ಮಹಿಳೆಯರ ಮೇಲಿನ ಅಫರಾಧ ಚಟುವಟಿಕೆಗಳು ಹೆಚ್ಚಾಗಿವೆ. ಯೋಜನೆಯನ್ನು ವಿನಾಕಾರಣ ವಿಳಂಬ ಮಾಡಿದ ಬಿಜೆಪಿ ಸರಕಾರ ಇದಕ್ಕೆ ಮೂಲ ಕಾರಣ. ರಾಜ್ಯ ಸರಕಾರ ಈ ಯೋಜನೆಯ ಅಳವಡಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕು. ಈ ಮೂಲಕ ನಗರವನ್ನು ಮಹಿಳೆಯರಿಗಾರಿ ಸುರಕ್ಷಿತವಾಗಿಸಬೇಕು ಎಂದು ಬೆಂಗಳೂರು ನಗರ ಎಎಪಿ ಮಹಿಳಾ ಘಟಕದ ಅಧ್ಯಕ್ಷರಾದ ಕುಶಲಾ ಸ್ವಾಮಿ ಆಗ್ರಹಿಸಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಯೋಜಕ ವಿಜಯ್‌ ಶಾಸ್ತ್ರಿಮಠ್‌ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

Tags: #saakshatvAam Aadmi PartybangaloreBJP
ShareTweetSendShare
Join us on:

Related Posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

by Shwetha
May 15, 2026
0

ಪತ್ನಿಯ ಜೀವನ ನಿರ್ವಹಣೆಗೆ ನ್ಯಾಯಾಲಯ ನಿಗದಿಪಡಿಸಿದ ಹಣವನ್ನು ನೀಡದೆ ಸಬೂಬು ಹೇಳುವ ಪತಿಯಂದಿರಿಗೆ ಕರ್ನಾಟಕ ಹೈಕೋರ್ಟ್ ಈಗ ಬಿಸಿ ಮುಟ್ಟಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಜೀವನಾಂಶ ನೀಡದಿದ್ದರೆ ಅಂತಹವರ...

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

by Shwetha
May 15, 2026
0

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram