ರಾಜ್ಯದ ಬಿಜೆಪಿ ಸರ್ಕಾರ ಸುಳ್ಳು ಹೇಳುತ್ತಿದೆ. ಆದರೆ ಅದನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ಮಾಜಿ ಸಚಿವ ಯು.ಟಿ ಖಾದರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಜೆಟ್ ಮಂಡಿಸಿದೆ. ಯಡಿಯೂರಪ್ಪನವರು ಯಾವ ಯೋಜನೆ ಉಳಿಸಿಕೊಳ್ಳುತ್ತಾರೆ, ಯಾವ ಯೋಜನೆ ರದ್ದು ಮಾಡುತ್ತಾರೆ ಅಂತ ಗೊತ್ತಿಲ್ಲ. ಬಿಜೆಪಿ ಸರ್ಕಾರದಲ್ಲಿ ಹಣಕಾಸು ವ್ಯವಸ್ಥೆ ಸರಿಯಿಲ್ಲ. ಅದರಿಂದಾಗಿ ಬೇರೆ ಬೇರೆ ಯೋಜನೆಗಳನ್ನು ಕಡಿತ ಮಾಡ್ತಾರೆ. ನಾವು ಕಷ್ಟದಲ್ಲಿದ್ದೇವೆ ಅಂತ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ. ಬಡವರ ಯೋಜನೆಗಳನ್ನ ಯಾಕೆ ಕಟ್ ಮಾಡ್ತಿದ್ದಾರೆ. ಶಾದಿಭಾಗ್ಯ ಯೋಜನೆಯನ್ನು ರದ್ದು ಮಾಡಲಾಗಿದೆ. ಕಳೆದ ವರ್ಷ ಶಾದಿಭಾಗ್ಯ ಯೋಜನೆಯಡಿಯಲ್ಲಿ 31 ಸಾವಿರ ಅಪ್ಲಿಕೇಶನ್ ಬಂದಿವೆ. ಅರ್ಜಿ ಸಲ್ಲಿಸಿದವರಿಗೆ ಅನುದಾನ ಬಿಡುಗಡೆ ಮಾಡಬೇಕು. ಆಹಾರ ಇಲಾಖೆಯಲ್ಲಿ 2 ಸಾವಿರ ಕೋಟಿ ಕಡಿತ ಮಾಡಲಾಗಿದೆ. ಹೊಸ ವರ್ಷದಲ್ಲಿ ಶಾದಿಭಾಗ್ಯ ಅಲ್ಲ ಶಾದಿಮಹಲ್ ಗೂ ಒಂದು ರೂಪಾಯಿ ಕೊಟ್ಟಿಲ್ಲ. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ 200 ಕೋಟಿ ಘೋಷಣೆ ಮಾಡಿದ್ದಾರೆ. ಆದರೆ 56 ಕೋಟಿ ಮಾತ್ರ ಮಾತ್ರ ಬುಕ್ ನಲ್ಲಿ ತೋರಿಸಿದ್ದಾರೆ. ಬಡವರ ಪರ ಇಲ್ಲದ ಯೋಜನೆಗಳನ್ನು ರದ್ದು ಪಡಿಸಲಿ. ಬಿಜೆಪಿ ಸರ್ಕಾರ ಸುಳ್ಳುಗಳನ್ನು ಹೇಳುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?
ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...








