ಬೆಂಗಳೂರು : ನಾನು ಶಿರಾಕ್ಕೆ ಹೋದಾಗ ಸರ್ಕಾರ ಕೊಡ್ತಿರುವ ರಾಗಿನ ಕೋಳಿ ಸಹಾ ತಿನ್ನಲ್ಲ ಅಷ್ಟು ಕಲ್ಲು, ಕಡ್ಡಿಗಳಿವೆ ಅಂತ ಜನ ಹಿಡಿಹಿಡಿ ಶಾಪ ಹಾಕ್ತಿದ್ರು. ನಾಚಿಕೆಯಾಗ್ಬೇಕು ಈ ಸರ್ಕಾರಕ್ಕೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು ಕಡಿತ ಮಾಡಿದೆ, ಅದರ ಜೊತೆಗೆ ವಿತರಣೆ ಆಗುತ್ತಿರುವ ಆಹಾರ ಪದಾರ್ಥಗಳು ಕಲಬೆರಕೆ ಬೇರೆ.
ನಾನು ಶಿರಾಕ್ಕೆ ಹೋದಾಗ ಸರ್ಕಾರ ಕೊಡ್ತಿರುವ ರಾಗಿನ ಕೋಳಿ ಸಹಾ ತಿನ್ನಲ್ಲ ಅಷ್ಟು ಕಲ್ಲು, ಕಡ್ಡಿಗಳಿವೆ ಅಂತ ಜನ ಹಿಡಿಹಿಡಿ ಶಾಪ ಹಾಕ್ತಿದ್ರು. ನಾಚಿಕೆಯಾಗ್ಬೇಕು ಈ ಸರ್ಕಾರಕ್ಕೆ ಎಂದು ಟ್ವೀಟ್ ಮಾಡಿದ್ದಾರೆ.
ಮುಂದುವರಿದು ರಾಜರಾಜೇಶ್ವರಿ ನಗರ ಉಪಚುನಾವಣೆ ಬಗ್ಗೆ ಟ್ವೀಟ್ ಮಾಡಿ, ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ.
ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತೆ.
ಮುನಿರತ್ನ ಅವರು ಎರಡು ಬಾರಿ ಗೆದ್ದು ಶಾಸಕನಾಗಲು ಕಾರಣ ಕಾಂಗ್ರೆಸ್ ಪಕ್ಷವೇ ಹೊರತು ಅವರ ವೈಯಕ್ತಿಕ ವರ್ಚಸ್ಸಲ್ಲ.
ಇದನ್ನೂ ಓದಿ : ಕ್ಷೇತ್ರದ ಅಭಿವೃದ್ಧಿಗೆ ನಿನ್ಗೆ ದುಡ್ಡು ಕೊಟ್ಟಿದ್ದು ಯಾರಪ್ಪ ಮುನಿರತ್ನ : ಸಿದ್ದರಾಮಯ್ಯ
ನಾನು ಮುಖ್ಯಮಂತ್ರಿಯಾಗಿದ್ದಾಗ ಆರ್.ಆರ್ ನಗರ ಕ್ಷೇತ್ರದ ಅಭಿವೃದ್ಧಿಗೆ ರೂ.2,000 ಕೋಟಿ ಅನುದಾನ ನೀಡಿದ್ದೆ, ಆದರೂ ನಮಗೆ ದ್ರೋಹ ಮಾಡಿದ್ರಲ ಮುನಿರತ್ನ ಅವರೇ, ಅಂಥಾ ಅನ್ಯಾಯ ನಾವೇನು ಮಾಡಿದ್ವಿ ನಿಮ್ಗೆ?
ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷವನ್ನು ತನ್ನ ತಾಯಿ ಅಂತ ಹೇಳ್ತಿದ್ದ ಮುನಿರತ್ನ ಅದೇ ತಾಯಿಗೆ ದ್ರೋಹ ಬಗೆದು ಬಿಜೆಪಿ ಸೇರಿದ್ರು. ನಾವು ಯಾಕಪ್ಪಾ ಪಕ್ಷನ ತಾಯಿ ಅಂತ ಕರೀತಿದ್ದಿ,
ಈಗ ಅದೇ ತಾಯಿಗೆ ಮೋಸ ಮಾಡಿದ್ಯಲ ಅಂದ್ರೆ ಕಾಂಗ್ರೆಸ್ ನಾಯಕರು ನನ್ನ ತಾಯಿಗೆ ಅವಮಾನ ಮಾಡ್ತಿದಾರೆಂದು ಗೊಳೋ ಅಂತ ಮೊಸಳೆ ಕಣ್ಣೀರು ಸುರಿಸ್ತಾರೆ ಎಂದು ಮುನಿರತ್ನ ವಿರುದ್ಧ ಕಿಡಿಕಾರಿದರು.
ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಮಾಜಿ ಸಿಎಂ ಸಿದ್ದರಾಮಯ್ಯ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜಾಲಹಳ್ಳಿ, ಗೋರಗುಂಟೆಪಾಳ್ಯ, ಹೆಚ್.ಎಂ.ಟಿ. ವಾರ್ಡ್ ವ್ಯಾಪ್ತಿಯಲ್ಲಿ ಮತ ಯಾಚಿಸಿದರು.
ಇದನ್ನೂ ಓದಿ : ಜೋಡೆತ್ತು..ಯಾರೇ ಬಂದ್ರೂ ನಮ್ದೆ ಗೆಲುವು; ಡಿಕೆಶಿ, ಸಿದ್ದುಗೆ ಜೋಶಿ-ಶೆಟ್ಟರ್ ಗುದ್ದು
ಈ ವೇಳೆ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel