ಭ್ರಷ್ಟಾಚಾರ ಮುಚ್ಚಿಹಾಕಲು ಬಿಜೆಪಿ ನನ್ನ ಮಗನ ಹೆಸರನ್ನ ಎಳೆದುತಂದಿದೆ : ಸಿದ್ದರಾಮಯ್ಯ

1 min read
Congress padayatre saaksha tv

ಭ್ರಷ್ಟಾಚಾರ ಮುಚ್ಚಿಹಾಕಲು ಬಿಜೆಪಿ ನನ್ನ ಮಗನ ಹೆಸರನ್ನ ಎಳೆದುತಂದಿದೆ : ಸಿದ್ದರಾಮಯ್ಯ

ಬೆಂಗಳೂರು : ತಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು ಬಿಜೆಪಿ ಅಗಲಿ ಹೋಗಿರುವ ನನ್ನ ಮಗನ ಹೆಸರನ್ನು ಎಳೆದು ತಂದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಕೇಶ್ ಸಿದ್ದರಾಮಯ್ಯ ಅವರ ಫೋಟೋವನ್ನು ಟ್ವೀಟ್ ಮಾಡಿತ್ತು. ಇದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ…

ತಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು ಬಿಜೆಪಿ ಅಗಲಿ ಹೋಗಿರುವ ನನ್ನ ಮಗನ ಹೆಸರನ್ನು ಎಳೆದು ತಂದಿದೆ. ಸರಿ, ನಮ್ಮ ಸರ್ಕಾರದ ಅವಧಿಯನ್ನೂ ಸೇರಿಸಿ ಬಿಟ್ ಕಾಯಿನ್ ಹಗರಣವನ್ನು ಸುಪ್ರೀಮ್ ಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಸಿಎಂ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ.

ನನ್ನ ಮಗ ರಾಕೇಶ್ ನಮ್ಮನಗಲಿ ಐದು ವರ್ಷಗಳಾಗಿವೆ, ಪುತ್ರಶೋಕ ನಿರಂತರ. ತನ್ನ ಮೇಲಿನ ಆರೋಪಕ್ಕೆ ಆತ ಪ್ರತಿಕ್ರಿಯಿಸಲೂ ಸಾಧ್ಯವಿಲ್ಲ. ಇಂತಹ ಸಮಯದಲ್ಲಿ ಬಿಜೆಪಿ ನನ್ನ ದಿವಂಗತ ಮಗನ ಹೆಸರನ್ನು ಎಳೆದು ರಾಜಕೀಯ ಮಾಡಲು ಹೊರಟಿರುವುದು “ಅತ್ಯಂತ ವೈಯಕ್ತಿಕ ಮತ್ತು ಕ್ಷುಲಕತನದ’ ರಾಜಕಾರಣ.

ರಾಕೇಶ್ ಜೊತೆಗೆ ಬಿಟ್‍ಕಾಯಿನ್ ಹಗರಣದ ಆರೋಪಿ ಶ್ರೀಕೃಷ್ಣನ ಗೆಳೆಯ ಹೇಮಂತ್ ಮುದ್ದಪ್ಪ ಇದ್ದಾನೆ ಎಂದು ಬಿಜೆಪಿ ಆರೋಪಿಸಿದೆ. ಹಾಗಿದ್ದರೆ 2018ರಲ್ಲಿ ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ನರೇಂದ್ರ ಮೋದಿ ಜೊತೆಗಿರುವ ಬ್ಯಾಂಕ್ ಲೂಟಿಕೋರ ನೀರವ್ ಮೋದಿಯ ಪೆÇೀಟೊವನ್ನು ಹೇಗೆ ವ್ಯಾಖ್ಯಾನಿಸುವುದು?

ಶ್ರೀಕೃಷ್ಣನ ಜೊತೆ ಬಂಧನಕ್ಕೊಳಗಾದ ಹೇಮಂತ್ ಮುದ್ದಪ್ಪನ ಬಿಡುಗಡೆಗಾಗಿ ಪೆÇಲೀಸರ ಜೊತೆ ಬಿಜೆಪಿದ ಪ್ರಮುಖ ನಾಯಕರೊಬ್ಬರು ಸಂಧಾನ ಮಾಡಿದ್ದು, ಆ ಸೇವೆಗಾಗಿ ಆರೋಪಿಯಿಂದ ಆ ಬಿಜೆಪಿ ನಾಯಕ ಬಿಟ್ ಕಾಯಿನ್ ಪಡೆದಿದ್ದ ಎಂಬ ಆರೋಪ ಇದೆ.

Siddaramaiah  saaksha tv

ಆ ನಾಯಕ ಯಾರೆಂದು ನಳಿನ್ ಕುಮಾರ್ ಕಟಿಲ್ ಅವರಿಗೆ ಗೊತ್ತಿರಬಹುದೇನೋ? ನನ್ನ ಕೈಯಲ್ಲಿ ಪುರಾವೆಗಳಿಲ್ಲದ ಕಾರಣ ನಾನು ಇಲ್ಲಿಯ ವರೆಗೆ ಯಾರ ವಿರುದ್ಧವೂ ನೇರ ಆರೋಪ ಮಾಡಿಲ್ಲ.

ಬಿಜೆಪಿ ಸರ್ಕಾರವೇ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿರುವ ವಿಷಯವನ್ನಷ್ಟೇ ಹೇಳುತ್ತಿದ್ದೇನೆ. ಈ ವರೆಗಿನ ಪೆÇಲೀಸರ ತನಿಖೆ ಯಾರೋ ಪ್ರಭಾವಿಗಳನ್ನು ರಕ್ಷಿಸಲು ನಡೆಸಿರುವ ನಾಟಕದಂತಿದೆ.

ನಮ್ಮ ಬುಟ್ಟಿಯಲ್ಲಿ ಹಾವು ಇಲ್ಲ ಎಂದಾದರೆ ಬಿಜೆಪಿ ನಾಯಕರು ಯಾಕೆ ಹಾವು ಕಂಡ ಹಾಗೆ ಬೆಚ್ಚಿ ಬೀಳುತ್ತಿದ್ದಾರೆ? ಯಾಕೆ ಸರತಿ ಸಾಲಲ್ಲಿ ನಿಂತು ಹೆಗಲು ಮುಟ್ಟಿ ನೋಡಿಕೊಂಡು ” ಸರ್ಕಾರ ತಪ್ಪುಮಾಡಿಲ್ಲ, ನಾವೆಲ್ಲ ನಿರಪರಾಧಿಗಳು’ ಎಂದು ಎದೆ ಬಡಿದು ಕೊಳ್ಳುತ್ತಿದ್ದಾರೆ?

ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ನಾಯಕರ ಮಕ್ಕಳ ಹೆಸರೂ ಕೇಳಿ ಬರುತ್ತಿವೆ. ಪುರಾವೆಗಳಿಲ್ಲದೆ ಕುಟುಂಬದ ಸದಸ್ಯರ ಹೆಸರು ಎಳೆದು ತರಬಾರದೆಂದು ಸುಮ್ಮನಿದ್ದೇನೆ. ಬಿಜೆಪಿ ನಾಯಕರು ಜೇನು ಗೂಡಿಗೆ ಕಲ್ಲೆಸೆಯುತ್ತಿದ್ದಾರೆ. ಕೆರಳಿದ ಜೇನು ನೊಣಗಳು ಯಾರಿಗೆಲ್ಲ ಕಚ್ಚಲಿದೆಯೋ ಗೊತ್ತಿಲ್ಲ ಎಂದು ಕುಟುಕಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd