ಎಂಟಿಬಿ ನಾಗರಾಜ್, ಆರ್.ಶಂಕರ್, ಉಮೇಶ್ ಕತ್ತಿಗೆ ಲಕ್
ಮೂವರು ಮೂಲ ಬಿಜೆಪಿ ಶಾಸಕರಿಗೂ ಛಾನ್ಸ್..!
ನವದೆಹಲಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಅಂದುಕೊಂಡಂತೆ ಆದರೆ ಭಾನುವಾರ ಮೂರು ಅಥವಾ ಐವರು ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದ್ದು, ಬಿಎಸ್‍ವೈ ಸಂಪುಟ ಸೇರಲಿದ್ದಾರೆ.
ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದೊಳಗೆ ಸಂಪುಟ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಸಿದ್ಧತೆ ನಡೆಸಿದ್ದು, ನಾಳೆ ಸಂಜೆಯೊಳಗೆ ಬಿಜೆಪಿ ಹೈಕಮಾಂಡ್‍ನಿಂದ ಮೆಸೇಜ್ ಬರುವುದೊಂದೇ ಬಾಕಿ ಇದೆ.
ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದ ಬಿ.ಎಸ್ ಯಡಿಯೂರಪ್ಪ. ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಂಪುಟ ವಿಸ್ತರಣೆಗೆ ಮೋದಿ ಸಹ ಓಕೆ ಅಂದಿದ್ದು, ಅಮಿತ್ ಶಾ, ನಡ್ಡಾ ಜೊತೆ ಚರ್ಚೆ ನಡೆಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ತಿಳಿಸಿದ್ದಾರೆ.
ಮೋದಿ ಭೇಟಿ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದ ಬಿಎಸ್‍ವೈ, ಅವರಿಂದಲೂ ಗ್ರೀನ್ ಸಿಗ್ನಲ್ ಪಡೆದಿದ್ದಾರೆ.
ಸಂಪುಟ ವಿಸ್ತರಣೆ ಯಾವಾಗ ಮಾಡಬೇಕು, ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದರ ಬಗ್ಗೆ ಚರ್ಚಿಸಿ ತೀರ್ಮಾನ ತಿಳಿಸುವುದಾಗಿ ಹೇಳಿದ್ದಾರೆ ಎಂದು ಯಡಿಯೂರಪ್ಪ ಪ್ರಕಟಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಹೊರಬಿದ್ದ ಕೆಲವೇ ಕ್ಷಣಗಳಲ್ಲಿ ಭಾನುವಾರ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಎಂಬ ಮಾಹಿತಿ ಬಂದಿದೆ. ಮೂವರು ಅಥವಾ ಐವರು ಶಾಸಕರು ಭಾನುವಾರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂಭಾವ್ಯ ಸಚಿವರ ಪಟ್ಟಿ
1. ಎಂಟಿಬಿ ನಾಗರಾಜ್
2. ಆರ್. ಶಂಕರ್
3. ಉಮೇಶ್ ಕತ್ತಿ
ಮೂವರು ಮೂಲ ಬಿಜೆಪಿ ಶಾಸಕರಿಗೂ ಸಂಪುಟದಲ್ಲಿ ಸ್ಥಾನ ನೀಡುವ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಹಾಗೂ ಜೆ.ಪಿ ನಡ್ಡಾ ಜತೆ ಚರ್ಚಿಸಿದ್ದಾರೆ. ಅವರು ಯಾರು ಎನ್ನುವುದು ಇನ್ನೂ ಪಕ್ಕಾ ಆಗಿಲ್ಲ.
ಮೂಲಗಳ ಪ್ರಕಾರ…
1. ಬಸನಗೌಡ ಪಾಟೀಲ್ ಯತ್ನಾಳ್
2. ಸುನಿಲ್‍ಕುಮಾರ್
3. ಅರವಿಂದ ಲಿಂಬಾವಳಿ ಸಂಪುಟ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.