ಬೆಂಗಳೂರು: ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಇಂದು ಹಾಗೂ ನಾಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ತವರು ಶಿವಮೊಗ್ಗದಲ್ಲಿ ನಡೆಯಲಿದೆ.
ಶಿವಮೊಗ್ಗ ನಗರ ಹೊರವಲಯದಲ್ಲಿರುವ ಪೆಸಿಟ್ ಕಾಲೇಜಿನ ಆವರಣದಲ್ಲಿ ನಡೆಯುವ ಕೋರ್ ಕಮಿಟಿ ಸಭೆ ಹಾಗೂ ವಿಶೇಷ ಸಭೆಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ನಡೆಯಲಿದೆ.
ಪಕ್ಷದ ರಾಜ್ಯ ಪದಾಧಿಕಾರಿಗಳು, ಪ್ರಕೋಷ್ಠಗಳ ಸಂಚಾಲಕರು, ಜಿಲ್ಲಾಧ್ಯಕ್ಷರು, ವಿಭಾಗ ಪ್ರಭಾರಿಗಳು ಸೇರಿದಂತೆ ಒಟ್ಟು 180 ಜನರು ಭಾಗವಹಿಸಲಿದ್ದಾರೆ.

ಸಂಪುಟ ವಿಸ್ತರಣೆ ಸಿಹಿಸುದ್ದಿ ತಂದ್ರಾ ಸಿಂಗ್
ಶಿವಮೊಗ್ಗದಲ್ಲಿ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಸಂಪುಟ ವಿಸ್ತರಣೆ ವಿಚಾರವಾಗಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಬೆಂಗಳೂರಿಗೆ ಬಂದಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಂಪುಟ ವಿಸ್ತರಣೆ ಕುರಿತಂದೆ ಹೈಕಮಾಂಡ್‍ನಿಂದ ಸಿಹಿ ಸಂದೇಶ ತಂದಿದ್ದಾರಾ ಎಂಬ ಕುತೂಹಲದಲ್ಲಿ ಬಿಜೆಪಿ ಶಾಸಕರು ಎದುರು ನೋಡುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








