BJP
ನವದೆಹಲಿ: ಇತ್ತೀಚೆಗಷ್ಟೇ ಇಡೀ ದೇಶಾದ್ಯಂತ ಹಲವೆಡೆ ಉಪಚುನಾವಣೆಗಳು, ಹಲವು ಕ್ಷೇತ್ರಗಳಿಗೆ ಚುನಾವಣೆಗಳು ನಡೆದವು. ಅಲ್ಲದೇ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆದು ಎನ್ ಡಿಎ ಭರ್ಜರಿ ಜಯಭೇರಿ ಬಾರಿಸಿದೆ. ಇದೀಗ ಉಪ ಚುನಾವಣೆ ಗೆಲುವಿನ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ದೇಶದ ಪ್ರತಿಯೊಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಜೆಪಿ ಪಕ್ಷದ ಮೇಲುಸ್ತುವಾರಿಗಳನ್ನು ನೇಮಿಸುವಂತೆ ಆದೇಶ ಹೊರಡಿಸಿದೆ.
ಅದರಂತೆಯೇ ಬಹುತೇಕ ಕಡೆಗಳಲ್ಲಿ ಮೇಲುಸ್ತುವಾರಿಗಳನ್ನ ನೇಮಕ ಮಾಡಲಾಗಿದೆ. ಮುಖ್ಯವಾಗಿ ಕರ್ನಾಟಕದ ರಾಜ್ಯ ಉಸ್ತುವಾರಿ ಸ್ಥಾನಕ್ಕೆ ಅರುಣ್ ಸಿಂಗ್ ಅವರನ್ನು ನೇಮಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಪಕ್ಷದ ಉಸ್ತುವಾರಿ ಸ್ಥಾನಕ್ಕೆ ರಾಧಾ ಮೋಹನ್ ಸಿಂಗ್ ರನ್ನು ಆಯ್ಕೆ ಮಾಡಲಾಗಿದೆ. ಮಣಿಪುರದ ಬಿಜೆಪಿ ರಾಜ್ಯ ಉಸ್ತುವಾರಿ ಆಗಿ ಸಂಬಿತ್ ಪಾತ್ರಾರನ್ನು ನೇಮಿಸಲಾಗಿದ್ದು, ಮಧ್ಯಪ್ರದೇಶದ ಉಸ್ತುವಾರಿಯಾಗಿ ಪಿ ಮುರಳೀಧರ್ ರಾವ್ ರನ್ನು ನೇಮಿಸಲಾಗಿದೆ. ಜಮ್ಮು – ಕಾಶ್ಮೀರದ ಬಿಜೆಪಿ ರಾಜ್ಯ ಉಸ್ತುವಾರಿ ಸ್ಥಾನಕ್ಕೆ ತರುಣ್ ಚುಂಗ್ ರನ್ನು ನೇಮಿಸಲಾಗಿದೆ. ಇನ್ನೂ ಬಿಹಾರದಲ್ಲಿ ಬಿಜೆಪಿಯ ಉಸ್ತುವಾರಿ ಆಗಿ ಭೂಪೇಂದ್ರ ಯಾದವ್ ರನ್ನ ನೇಮಕ ಮಾಡಲಾಗಿದೆ. ಹೀಗೆ ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಈಗಾಗಲೇ ಬಿಜೆಪಿ ಪಕ್ಷದ ಉಸ್ತುವಾರಿಗಳನ್ನ ನೇಮಕ ಮಾಡಲಾಗಿದೆ.
ಭಾರತವನ್ನ ಕೆಣಕಿದ ಪಾಕ್ ಗೆ ತಕ್ಕ ಪಾಠ ಕಲಿಸಿದ ‘ಭಾರತೀಯ ಸೇನೆ’
BJP
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








