BJP – ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ತನಿಖೆ ಮಾಡಿಸಿ
ಬೆಂಗಳೂರು : ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಅವುಗಳನ್ನೂ ಸೇರಿಸಿ ತನಿಖೆ ಮಾಡಿಸಿ, ನಮ್ಮ ಅಭ್ಯಂತರ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ರಾಜ್ಯ ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ನ್ಯಾಯಾಂಗ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬೀಳಲು ಸಾಧ್ಯ. ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಅವುಗಳನ್ನೂ ಸೇರಿಸಿ ತನಿಖೆ ಮಾಡಿಸಿ, ನಮ್ಮ ಅಭ್ಯಂತರ ಇಲ್ಲ.
ಲಂಚಕೊಟ್ಟ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡ, ಇನ್ನೊಬ್ಬರು ರಾಷ್ಟ್ರಪತಿಗಳಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ವರ್ಗಾವಣೆಗಾಗಿ ಲಂಚ ಕೊಟ್ಟಿರುವ ಮತ್ತೊಬ್ಬ ಅಧಿಕಾರಿಗೆ ಹೃದಯಾಘಾತವಾಗಿದೆ. ಇನ್ನೇನು ಸಾಕ್ಷಿಗಳು ಬೇಕು

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದಾಗೆಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾಖಲಾತಿ ಕೊಡಿ ಎಂದು ಕೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಒಂದು ಕುಟಿಲ ಪ್ರಯತ್ನ ಮಾಡುತ್ತಿದ್ದಾರೆ.
ಸಾಮಾನ್ಯವಾಗಿ ಭ್ರಷ್ಟಾಚಾರ ಪ್ರಕರಣಗಳಲ್ಲಿ ದಾಖಲಾತಿ ಒದಗಿಸುವುದು ಕಷ್ಟ. ಆದರೂ ಗುತ್ತಿಗೆದಾರರ ಸಂಘದವರು 6-7-2021ರಲ್ಲಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ದೂರಿದ್ದಾರೆ. ನ್ಯಾಯಾಂಗ ತನಿಖೆ ನಡೆಸುವುದಾದರೆ ಅಗತ್ಯ ದಾಖಲೆ ಒದಗಿಸುವುದಾಗಿಯೂ ಹೇಳಿದ್ದಾರೆ. ಆದರೂ ಪ್ರಧಾನಿ ಯಾವ ಕ್ರಮ ಕೈಗೊಂಡಿಲ್ಲ.
40% ಭ್ರಷ್ಟಾಚಾರದ ಬಗ್ಗೆ ವಿಧಾನಸಭೆಯಲ್ಲಿ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಕೇಳಿದರೆ ಬಿಜೆಪಿ ಸರ್ಕಾರ ನಿರಾಕರಿಸಿದೆ. ಚರ್ಚೆಯನ್ನು ಎದುರಿಸಲಾಗದೆ ನಮ್ಮ ವಿರುದ್ಧ ಪ್ರತಿ ಆರೋಪ ಮಾಡುತ್ತಿದ್ದಾರೆ. ನಮ್ಮ ಕಾಲದಲ್ಲಿ ವಿರೋಧ ಪಕ್ಷವಾಗಿದ್ದ ಬಿಜೆಪಿ ಏನು ಮಾಡುತ್ತಿತ್ತು ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : https://saakshatv.com/karnataka-bjp-sl…m-siddaramaiah-2/