ಹುಬ್ಬಳ್ಳಿ: ಬಿಜೆಪಿ (BJP)ಯು ಭಾರತೀಯ ಜೂಟಾ ಪಾರ್ಟಿ ಎಂದು ಸಚಿವ ಈಶ್ವರ ಖಂಡ್ರೆ (Eshwar Khandre) ವ್ಯಂಗ್ಯವಾಡಿದ್ದಾರೆ.
ಈ ಕುರಿತು ನಗರದಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಿಜೆಪಿಯು ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ಕೊರೊನಾದಲ್ಲಿ ಸಾವನ್ನಪ್ಪಿದವರ ಶಾಪ ಅವರಿಗೆ ತಟ್ಟುತ್ತದೆ. ಸಿಬಿಐ, ಐಟಿ, ಚುನಾವಣೆ ಆಯೋಗ ಎಲ್ಲಾ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೊರೊನಾ ಸಂದರ್ಭದಲ್ಲಿ ರಾಜ್ಯದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ. 2000 ಇಂಜೆಕ್ಷನ್ 30 ಸಾವಿರಕ್ಕೆ ಕಾಳ ಸಂತೆಯಲ್ಲಿ ಮಾರಾಟವಾಗಿದೆ. ಜನರ ಶಾಪ ಬಿಜೆಪಿಯವರಿಗೆ ತಟ್ಟುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೋದಿ, ಅಮಿತ್ ಶಾ, ಬಿಜೆಪಿ ವಿರುದ್ಧ ಮಾತನಾಡಿದವರನ್ನು ಜೈಲಿಗೆ ಹಾಕಿದ್ದನ್ನು ನೋಡಿದ್ದೇವೆ. ಕಾಂಗ್ರೆಸ್ ಆ ರೀತಿ ಮಾಡುವುದಿಲ್ಲ, ಮಾಡಿದರೆ ಪ್ರಜಾಪ್ರಭುತ್ವ ಉಳಿಯುತ್ತಿರಲಿಲ್ಲ. ಕಾಂಗ್ರೆಸ್ ಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇದೆ ಎಂದು ಹೇಳಿದ್ದಾರೆ.








