ದ್ರಾವಿಡ ನೆಲದಲ್ಲಿ ಬಿಜೆಪಿ ಬೆಳೆಯುತ್ತಿದೆ : ಅಣ್ಣಾಮಲೈ ವಿಶ್ವಾಸ
ಮೈಸೂರು : ತಮಿಳು ನಾಡಿನಲ್ಲಿ ಭಾರತೀಯ ಜನತಾ ಪಾರ್ಟಿ ವಿಸ್ತಾರವಾಗಿ ಬೆಳೆಯುತ್ತಿದೆ. ಇದು ಮುಂದಿನ ಚುನಾವಣೆಗೆ ಅನುಕೂಲವಾಗಲಿದೆ ಎಂದು ತಮಿಳುನಾಡು ಉಪಾಧ್ಯಕ್ಷ ಕೆ ಅಣ್ಣಾಮಲೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ಅಣ್ಣಾಮಲೈ ಅವರು ಮೈಸೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಂಸದ ಪ್ರತಾಪ್ ಸಿಂಹ ಜೊತೆ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ್ರಾವಿಡ ನೆಲದಲ್ಲಿ ಬಿಜೆಪಿ ಬೆಳೆಯುತ್ತಿದೆ.
ಇದು ಮುಂದಿನ ವಿಧಾನಸಭಾ ಚುನಾವಣೆಗೆ ಅನುಕೂಲವಾಗಲಿದೆ. ಈ ಹಿಂದೆ ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳಿಗಿಂತ ಮೊದಲು ಕಾಂಗ್ರೆಸ್ ನೆಲೆ ಇತ್ತು. ನಂತರ ಪ್ರಾದೇಶಿಕ ಪಕ್ಷಗಳೇ ಸ್ಟ್ರಾಂಗ್ ಆದವು.
ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿ ವಿಸ್ತಾರವಾಗಲಿದೆ ಎಂದು ತಿಳಿಸಿದರು.
ಅಲ್ಲದೆ ತಮಿಳುನಾಡಿಗೆ ಪ್ರಧಾನಿ ಮೋದಿ ಅವರು ಹಲವು ಯೋಜನೆಗಳನ್ನು ನೀಡಿದ್ದಾರೆ. ಅವರ ಯೋಜನೆಗಳಿಂದ ಈಗಾಗಲೇ ಬಿಜೆಪಿಯತ್ತ ಯುವಕರು ಮುಖ ಮಾಡಿದ್ದಾರೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









