ಬಿಜೆಪಿಯವರು ಪಿಕ್ ಪಾಕೇಟ್ ಮಾಡುತ್ತಿದ್ದಾರೆ : ಡಿ.ಕೆ ಶಿವಕುಮಾರ್
ಕೊಪ್ಪಳ: ಬಿಜೆಪಿಯವರು ಜನರ ದುಡ್ಡನ್ನು ದೋಚುತ್ತಿದ್ದು, ಪೆಟ್ರೋಲ್, ಗ್ಯಾಸ್ ಬೆಲೆ ಏರಿಸುವ ಮೂಲಕ ಜನರಿಂದ ಪಿಕ್ ಪಾಕೇಟ್ ಮಾಡುತ್ತಿದ್ದಾರೆ ಎಂದು ಕೊಪ್ಪಳದ ಶಿವಶಾಂತವೀರ ಮಂಗಲ ಭವನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಪರಿಶೀಲನಾ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಮುಂದುವರೆದು ಬಿಜೆಪಿಯವರು ಪುನೀತ್ ರಾಜ್ಕುಮಾರ್ ಅಭಿನಯದ ಜೇಮ್ಸ್ ಸಿನಿಮಾವನ್ನ ಚಿತ್ರಮಂದಿರಗಳಿಂದ ತೆಗೆಸಲು ಹೊರಟಿದ್ದಾರೆ. ನಾವು ಒಳ್ಳೆಯ ಸರ್ಕಾರ ಮಾಡಿದರೂ ಜನರಿಗೆ ತಿಳಿಸಲಿಲ್ಲ. ಬಿಜೆಪಿ ಸರ್ಕಾರ ವಿದ್ಯುತ್ ಕಟ್ ಮಾಡುತ್ತಿದೆ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಕೊಪ್ಪಳ ಜಿಲ್ಲೆಯಲ್ಲಿ ನಾವು ಐದಕ್ಕೆ ಐದೂ ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಸದಸ್ಯತ್ವ ಹೆಚ್ಚು ಮಾಡಿಸಲು ಎಲ್ಲ ಕಾರ್ಯಕರ್ತರು ಹೆಚ್ಚು ಸಹಕಾರ ನೀಡಿದ್ದಾರೆ. ಬಿಜೆಪಿ ಪಕ್ಷದಿಂದ ನಮಗೆ ಮೋಸವಾಗಿದೆ ಎಂದು ನೋಂದಣಿಕಾರರಿಗೆ ತಿಳಿಸುತ್ತಿದ್ದಾರೆ. ಪಕ್ಷದಲ್ಲಿ ಕೆಲವರು ವಿರೋಧಿಗಳಿದ್ದು, ಅವರು ನನ್ನ ಬಗ್ಗೆ ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದಾರೆ ಕಿಡಿಕಾರಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ, ಮಾಜಿ ಸಚಿವ ಬಸವರಾಜ ರಾಯರಡ್ಡಿ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಕೆ. ರಾಘವೇಂದ್ರ ಹಿಟ್ನಾಳ್, ಮಾಜಿ ಶಾಸಕ ಹಸನಸಾಬ ದೋಟಿಹಾಳ, ಮಲ್ಲಿಕಾರ್ಜುನ ನಾಗಪ್ಪ, ಸುದರ್ಶನ ನಾಚಿಯಪ್ಪನ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.