ಬೆಂಗಳೂರು : ದೇಶ ಸೇವೆಯ ಗುರಿ ಹೊಂದಿರುವ ಪ್ರತಿ ದೇಶವಾಸಿಯೂ ಬಿಜೆಪಿಯನ್ನೇ ಬೆಂಬಲಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.
ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದು, ಇದೀಗ ಅವರಿಗೆ ಶುಭಾಶಯಗಳ ಸುರಿಮಳೆಗಳೇ ಹರಿದುಬರುತ್ತಿವೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಷ್ಟ್ರೀಯವಾದಿಗಳು, ಅಪ್ಪಟ ದೇಶ ಭಕ್ತರನ್ನು ಹೊಂದಿರುವ ಪಕ್ಷವೇ ಬಿಜೆಪಿ. ದೇಶ ಸೇವೆಯ ಗುರಿ ಹೊಂದಿರುವ ಪ್ರತಿ ದೇಶವಾಸಿಯೂ ಬಿಜೆಪಿಯನ್ನೇ ಬೆಂಬಲಿಸುತ್ತಾರೆ. ಅಣ್ಣಾಮಲೈ ಅವರನ್ನು ತುಂಬು ಹೃದಯದಿಂದ ನಮ್ಮ ಬಿಜೆಪಿ ಕುಟುಂಬಕ್ಕೆ ಸ್ವಾಗತಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
![]()
ಅಣ್ಣಾಮಲೈ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರುಳೀಧರ್ ರಾವ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಅವರ ನೇತೃತ್ವದಲ್ಲಿ ಅಣ್ಣಾಮಲೈ ಅವರು ಬಿಜೆಪಿ ಸೇರ್ಪಡೆಯಾಗಿದ್ದು, ಪಕ್ಷದ ಸದಸ್ಯತ್ವ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಕೋರಿದರು.








