15 ವರ್ಷಗಳ ಬಳಿಕ ಮತ್ತೆ ಬಿಜೆಪಿ-ಜೆಡಿಎಸ್ ದೋಸ್ತಿ : ಶತ್ರುಗಳು ಅಲ್ಲ, ಮಿತ್ರರೂ ಅಲ್ಲ
ಬೆಂಗಳೂರು : ಬರೋಬ್ಬರಿ 15 ವರ್ಷಗಳ ಹಿಂದೆ ಬಿಜೆಪಿ – ಜೆಡಿಎಸ್ ನ ನಡುವಿನ 20-20 ಒಪ್ಪಂದದ ಸರ್ಕಾರ ಪತನಗೊಂಡಿತ್ತು. ಅಂದು ಜೆಡಿಎಸ್ ಪಕ್ಷ ಬಿಜೆಪಿಗೆ ದ್ರೋಹ ಮಾಡ್ತು ಅಂತ ಕೇಸರಿ ಕಲಿಗಳು ಆರೋಪಿಸುತ್ತಾ ಬಂದಿದ್ದಾರೆ.
ಅದೇ ರೀತಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಪತನದಲ್ಲಿ ಕಮಲದ ಆಪರೇಷನ್ ಇದೆ ಅಂತ ದಳಪತಿಗಳು ಮೊನ್ನೆಯವರೆಗೂ ಆರೋಪಿಸುತ್ತಲೇ ಇದ್ದರು.
ಮೈತ್ರಿ ಸರ್ಕಾರದ ಪತನದ ಬಳಿಕ ಬಿಜೆಪಿ ನಾಯಕರ ಬಗ್ಗೆ ತೀವ್ರ ಆಕ್ರೋಶ ಹೊರಹಾಕುತ್ತಿದ್ದ ಜೆಡಿಎಸ್ ನಾಯಕರು, ಇದೀಗ ತಣ್ಣಗಾಗಿದ್ದಾರೆ.
ಇದಲ್ಲದೆ ಬರೋಬ್ಬರಿ 15 ವರ್ಷಗಳ ಬಳಿಕ ಮತ್ತೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ.
ಆ ಮೂಲಕ ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಎಂಬುದನ್ನ ಸಾಬೀತು ಮಾಡಿದ್ದಾರೆ.
ಹೌದು..! ಮೈತ್ರಿ ಸರ್ಕಾರ ಪತನದ ಬಳಿಕ ಸಿಕ್ಕ ಸಿಕ್ಕಲೆಲ್ಲಾ ಬಿಜೆಪಿಯನ್ನ ಕೋಮುವಾದಿ ಎಂದು ಆರ್ಭಟಿಸುತ್ತಿದ್ದ ಜೆಡಿಎಸ್ ನಾಯಕರು ಇದೀಗ ಅದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಹಾಗೂ ಉಪಸಭಾಪತಿ ಸ್ಥಾನಗಳನ್ನು ಹಂಚಿಕೊಳ್ಳುವ ಮೂಲಕ, 15 ವರ್ಷಗಳ ಬಳಿಕ ಮತ್ತೊಮ್ಮೆ ಬಿಜೆಪಿ-ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ.
ಅಷ್ಟಕ್ಕೂ ಬಿಜೆಪಿ – ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಕಾರಣವಾದರೂ ಏನು ಅಂತ ನೋಡೋದಾದ್ರೆ.. ಅದಕ್ಕೆ ಸಿಗುವ ಉತ್ತರ ವಿಧಾನ ಪರಿಷತ್..!
ಹೌದು..! ವಿಧಾನ ಪರಿಷತ್ ಉಪ ಸಭಾಪತಿಯಾಗಿದ್ದ ಜೆಡಿಎಸ್ ಪಕ್ಷದ ಎಸ್.ಎಲ್ ಧರ್ಮೇಗೌಡ ಅವರ ನಿಧನದಿಂದ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆದಿದೆ. ಇದರಲ್ಲಿ ಬಿಜೆಪಿ ಸದಸ್ಯ ಪ್ರಾಣೇಶ್ ಅವರು ವಿಧಾನ ಪರಿಷತ್ ಉಪ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಸದಸ್ಯ ಪ್ರಾಣೇಶ್ ಉಪಸಭಾಪತಿಯಾಗಲು ಜೆಡಿಎಸ್ ಬೆಂಬಲ ನೀಡಿದೆ. ಅದರಂತೆ ಜೆಡಿಎಸ್ ನ ಸದಸ್ಯರು ಸಭಾಪತಿ ಆಗೋದಕ್ಕೆ ಬಿಜೆಪಿ ಬೆಂಬಲ ನೀಡಲಿದೆ.
ಸಭಾಪತಿ ಸ್ಥಾನವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡುವ ಕುರಿತು ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿಯೇ ಮಾತುಕತೆಗಳಾಗಿವೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಾತನಾಡಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಈ ಹೊಂದಾಣಿಕೆಯ ಹಿಂದೆ ದೊಡ್ಡ ರಾಜಕೀಯ ಲೆಕ್ಕಾಚಾರವಿದೆ ಅನ್ನೋದು ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಮಾತು.
ಅಂದಹಾಗೆ ಈ ಹಿಂದೆ ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದ ಜೆಡಿಎಸ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಟ್ಟಿತ್ತು. ಹಾಗೆ ಉಪ ಸಭಾಪತಿ ಸ್ಥಾನವನ್ನು ತಾನು ಪಡೆದುಕೊಂಡಿತ್ತು.
ಮೈತ್ರಿ ಸರ್ಕಾರ ಪತನದ ಬಳಿಕ ಸಭಾಪತಿ ಸ್ಥಾನ ನಮಗೆ ಕೊಡಿ ಅಂತ ಜೆಡಿಎಸ್ ಬೇಡಿಕೆ ಇಟ್ಟಿತ್ತು. ಇದಕ್ಕೆ ಕಾಂಗ್ರೆಸ್ ಕೇರ್ ಮಾಡದ ಕಾರಣ ಇದೀಗ ಜೆಡಿಎಸ್ ಕಮಲದ ಜೊತೆ ಸೇರಿದೆ.
ಇನ್ನು ವಿಶೇಷ ಏನೆಂದ್ರೆ ಮೈತ್ರಿ ಸರ್ಕಾರದ ವೇಳೆ ಜೆಡಿಎಸ್ ವಿರುದ್ಧ ಬೆಂಕಿ ಕಾರಿ ಇದೊಂದು ಅಪವಿತ್ರ ಮೈತ್ರಿ ಎಂದಿದ್ದ ಬಿಜೆಪಿ ಬಿಗ್ ಬಾಸ್ ಇದೀಗ ಜೆಡಿಎಸ್ ಜೊತೆಗಿನ ಹೊಂದಾಣಿಕೆಗೆ ಉತ್ಸುಕರಾಗಿದ್ದಾರಂತೆ.
ಯಾಕೆಂದ್ರೆ ಪ್ರಾದೇಶಿಕ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡರೇ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಸಮರ್ಥವಾಗಿ ಎದುರಿಸಬಹುದು. ಜೆಡಿಎಸ್ ಜೊತೆಗಿನ ಮೈತ್ರಿ ಮುಂದಿನ ದಿನಗಳಲ್ಲಿ ಬಿಜೆಪಿಗೆ ಲಾಭವಾಗಬಹುದು ಎಂದು ಬಿಜೆಪಿಯ ದೆಹಲಿ ವರಿಷ್ಠರು ಲೆಕ್ಕಾಚಾರ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel