ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ಮೂಡಿಸಿರುವ ರೀತಿಯಲ್ಲಿ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಚಟುವಟಿಕೆಗಳು ವೇಗ ಪಡೆದಿವೆ. ಮಹತ್ವದ ಬೆಳವಣಿಗೆಯೊಂದರಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಈ ಭೇಟಿಯ ಸಮಯ, ಅದರ ಹಿನ್ನೆಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಎಲ್ಲವೂ ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸುವಂತಿವೆ. ರಾಜ್ಯ ಸರ್ಕಾರದಲ್ಲಿ ಅಧಿಕಾರ ಹಸ್ತಾಂತರ, ನಾಯಕತ್ವ ಬದಲಾವಣೆ, ಬಣಜಗಳ ಗೊಂದಲ ಜೋರಾಗಿರುವ ಸಂದರ್ಭದಲ್ಲಿ ಈ ಭೇಟಿ ರಾಜಕೀಯವಾಗಿ ದೊಡ್ಡ ಸಂದೇಶ ನೀಡುತ್ತಿದೆ.
ಈ ಭೇಟಿಯಲ್ಲಿ ಸರ್ಕಾರದ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವ ಬಗ್ಗೆ ಇಬ್ಬರು ನಾಯಕರ ನಡುವೆ ತೀವ್ರ ಚರ್ಚೆ ನಡೆದಿರುವ ಸಾಧ್ಯತೆ ಇದೆ.
ವಿರೋಧ ಪಕ್ಷಗಳ ನಡುವೆ ತಂತ್ರ ರೂಪಿಸುವುದು, ಭವಿಷ್ಯದ ರಾಜಕೀಯ ಹೆಜ್ಜೆಗಳನ್ನು ನಿರ್ಧರಿಸುವ ವಿಚಾರಗಳು ಪ್ರಮುಖವಾಗಿದ್ದವು ಎನ್ನಲಾಗಿದೆ.
ವಿಜಯೇಂದ್ರ ಅವರು ದೆಹಲಿ ಪ್ರವಾಸದ ಸಂದರ್ಭದಲ್ಲಿ ಬಿಜೆಪಿ ಹಿರಿಯ ನಾಯಕರನ್ನೂ ಭೇಟಿಯಾಗಿ ಮತ್ತಷ್ಟು ಸಮಾಲೋಚನೆ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಒಳಜಗಳ ಉಚ್ಛಸ್ಥಿತಿಗೆ ತಲುಪಿರುವಾಗ, ವಿರೋಧ ಪಕ್ಷಗಳು ಅದನ್ನು ಅವಕಾಶವೆಂದು ನೋಡುತ್ತಿರುವಂತೆ ತೋರುತ್ತಿದೆ.
ಬಿಜೆಪಿ–ಜೆಡಿಎಸ್ ನಾಯಕರು ಮರು ಒಗ್ಗಟ್ಟಿನತ್ತ ಸಾಗುವ ಸಂಭವವೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಮುಂದಿನ ಕೆಲವು ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಹೊಸ ಮೈತ್ರಿ, ಬೆಳವಣಿಗೆಗಳು ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಸಿಎಂ ಕುರ್ಚಿ ಕುರಿತು ಗೊಂದಲ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಬಿಜೆಪಿ ಮತ್ತು ಜೆಡಿಎಸ್ ನಡುವಿನ ಈ ಭೇಟಿಗಳು ರಾಜಕೀಯವಾಗಿ ದೊಡ್ಡ ಮಹತ್ವ ಪಡೆದುಕೊಂಡಿವೆ. ಎಂದಿನಂತೆ, ಮುಂದಿನ ಹೆಜ್ಜೆಗಳಿಗೆ ಎಲ್ಲರ ಕಣ್ಣು ದೆಹಲಿಯತ್ತವಿದೆ.








