BJP : ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಭೇಟಿ..!!
ಈ ವರ್ಷ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳುಗಳು ಬಾಕಿ ಇರುವಾಗಲೇ ರಾಜ್ಯದಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರಿದೆ..
ಕಾಂಗ್ರೆಸ್ , ಜೆಡಿಎಸ್ , ಬಿಜೆಪಿ ಪಕ್ಷಗಳು ಈಗಿನಿಂದಲೇ ಚುನಾವಣೆ ಗೆಲ್ಲಲು ರಣತಂತ್ರಗಳನ್ನ ಹೆಣೆದುಕೊಳ್ತಿದ್ದಾರೆ.. ಇತ್ತ ಕಮಲ ಪಾಳಯದ ವರಿಷ್ಠರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.. ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡ್ಯಗೆ ಭೇಟಿ ನೀಡಿದ್ದ ಬೆನ್ನಲ್ಲೇ ಇದೀಗ ಇಂದು ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ಭೇಟಿ ನೀಡಿದ್ದಾರೆ..
ಜೆಪಿ ನಡ್ಡಾ ಮತ್ತು ಅರುಣ್ ಸಿಂಗ್ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಮಾಡಲಿದ್ದಾರೆ,…
ತುಮಕೂರು ಮತ್ತು ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ಪ್ರಮುಖ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ..
ಇಂದು ತುಮಕೂರು ಮತ್ತು ಮಧುಗಿರಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಜೊತೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ..
ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮಿಜೀ ಗದ್ದುಗೆಗೆ ದರ್ಶನ ಪಡೆಯಲಿದ್ದಾರೆ.. ಸಂಜೆ ಚಿತ್ರದುರ್ಗದಲ್ಲಿ ವೀರ ಮದಕರಿ ನಾಯಕ, ಒನಕೆ ಓಬವ್ವ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ಆರೆ..
ಚಿತ್ರದುರ್ಗ ಜಿಲ್ಲೆಯ ಎಸ್‍ಸಿ, ಎಸ್‍ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ..
ಸಂಜೆ ಶ್ರೀ ಮಾದಾರ ಚೆನ್ನಯ್ಯ ಮಠ, ಸಿರಿಗೆರೆ ಶ್ರೀ ತರಳಬಾಳು ಮಠಕ್ಕೆ ಭೇಟಿ ನೀಡಲಿದ್ದಾರೆ.
ದಾವಣಗೆರೆ ವಿಭಾಗದ ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾ ಅಧ್ಯಕ್ಷರ ಸಭೆಯಲ್ಲಿ ಭಾಗಿಯಾಗಲಿದ್ದಾರೆ..
ನಾಳೆ ಬೆಳಿಗ್ಗೆ ಹರಿಹರದ ಶ್ರೀ ಪಂಚಮಸಾಲಿ ಮಠಕ್ಕೆ ಭೇಟಿ ನೀಡಲಿದ್ದಾರೆ.. ಬೆಳ್ಳುಡಿಯ ಶ್ರೀ ಕನಕಗುರುಪೀಠಕ್ಕೆ ಭೇಟಿ ನೀಡಲಿದ್ದು , ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರು ಪೀಠಕ್ಕೆ ಭೇಟಿ ನೀಡಲಿದ್ದಾರೆ..
ದಾವಣಗೆರೆ ದಕ್ಷಿಣದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ನಾಳೆ ಸಂಜೆ ತುಮಕೂರು ಜಿಲ್ಲೆಯ ಸಿರಾ ನಗರದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ..
BJP , jp nadda visiting karnataka , saakshatv








