ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಿ.ಟಿ ರವಿ (CT Ravi) ವಿರುದ್ಧ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.
ಅಲ್ಲದೇ, ವಿಪಕ್ಷಗಳ ಮಧ್ಯೆಯೂ ಗಲಾಟೆ ನಡೆದಿದೆ. ಹೀಗಾಗಿ ಸುವರ್ಣ ಸೌಧದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿದ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಬೆಂಬಲಿಗರು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಏಕವಚನದಲ್ಲಿ ಉತ್ತರ ಕರ್ನಾಟಕ ಭಾಷೆಯಲ್ಲಿ ಬೈಯ್ದಿದ್ದಾರೆ. ಕೆಲವರು ಹಲ್ಲೆಗೂ ಯತ್ನಿಸಿರುವ ದೃಶ್ಯಗಳು ಕಂಡುಬಂದಿವೆ.
ಸಿ.ಟಿ ರವಿ ವಿರುದ್ಧ ಆರೋಪ ಕೇಳಿ ಬರುತ್ತಿದ್ದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿದ್ದಾರೆ. ನೂರಾರು ಬೆಂಬಲಿಗರು ಸುವರ್ಣಸೌಧದ ಎದುರು ಜಮಾಯಿಸಿದ್ದಾರೆ. ಸೌಧದ ಫಸ್ಟ್ಫ್ಲೋರ್ ಲಾಂಜ್ ಬಳಿ ನಿಂತು ಗಲಾಟೆ ಮಾಡಿದ್ದಾರೆ.
ಏಯ್, ಆಚೆ ಬಾರೋ, ಧೈರ್ಯವಿದ್ದರೆ ಹೊರಗೆ ಬಾ..ಸೂ…ಮಗನೇ ಎಂದು ಆವಾಜ್ ಹಾಕಿದ್ದಾರೆ. ಈ ವೇಳೆ ಒಂದಿಬ್ಬರು ಹಲ್ಲೆಗೂ ಯತ್ನಿಸಿದ ಪ್ರಸಂಗ ನಡೆದಿದೆ.