C T RAVI | ಕಣ್ಣಿಗೆ ಎಣ್ಣೆ ಹಾಕಿಕೊಂಡು ಕೆಲ್ಸ ಮಾಡಿ, ಹೊಟ್ಟೆಗಲ್ಲ
ಕೋಲಾರ : ಬಿಜೆಪಿ ಅಧಿಕಾರಕ್ಕೇರಲು ಕಾರ್ಯರ್ತರು ಕಣ್ಣಿಗೆ ಎಣ್ಣೆ ಹಾಕಿಕೊಂಡು ಕೆಲಸ ಮಾಡಬೇಕು, ಹೊಟ್ಟೆಗಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ಇಂದು ಪಕ್ಷದ ಕಾರ್ಯಕ್ರಮ ನಡೆಯಿತು.
ಈ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಿ.ಟಿ.ರವಿ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ತಿರುಕನ ಕನಸು ಕಾಣುತ್ತಿದ್ದಾರೆ.

ಅವರ ಕನಸು ಯಾವತ್ತಿಗೂ ನನಸು ಆಗಲ್ಲ. ಕಾಂಗ್ರೆಸ್ ಟೆಂಟ್ ಸಮೇತ ಕಿತ್ತು ಹೋಗಲಿದ್ದು, ಗೂಟ ಮಾತ್ರ ಉಳಿಯಲಿದೆ ಎಂದು ಕಿಚಾಯಿಸಿದರು.
ಇದೇ ವೇಳೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಿ.ಟಿ.ರವಿ, ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದ ರಾಜಕೀಯ ಧ್ರುವೀಕರಣ ಆಗಲಿದೆ.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕೋಲಾರದಲ್ಲಿ ಬಿಜೆಪಿ ಪಕ್ಷ 6ಕ್ಕೆ 6 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.